spot_img
Friday, April 25, 2025
spot_img

ಬ್ರಹ್ಮಾವರ ಕೃಷಿ ಕಾಲೇಜಿನಲ್ಲಿ ಡಿಪ್ಲೋಮಾ ಕೃಷಿ ಕೋರ್ಸ್‌ಗೆ ಅರ್ಜಿ ಆಹ್ವಾನ !

ಜನಪ್ರತಿನಿಧಿ (ಶಿವಮೊಗ್ಗ/ಬ್ರಹ್ಮಾವರ) : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‌ ಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೋಧನಾ ಕ್ರಮ ಮತ್ತು ಮಾಧ್ಯಮ: ಡಿಪ್ಲೊಮಾ (ಕೃಷಿ)ಯನ್ನು ಕನ್ನಡ ಮಾಧ್ಯಮದಲ್ಲ ಸೆಮಿಸ್ಟರ್ (4 ಸಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು.

ಪ್ರವೇಶ ಅರ್ಹತೆ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್” ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ. 45 ಅಂಕಗಳೂಂದಿಗೆ ಉತ್ತೀರ್ಣರಾಗಿರಬೇಕು (ಪ್ರಜಾ/ ಪ.ಪಂ/ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ. 40) ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು) ದಿನಾಂಕ: 28-08-2024 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು.

ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.

ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧಿಕೃತ ವೆಬ್ ಸೈಟ್ ಮೂಲಕ ದಿನಾಂಕ 31-07-2024 ರಿಂದ 20-08-2024 ನಡುವೆ ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ರೀತಿ ವೆಬ್‌ಸೈಟ್ ಮುಖಾಂತರ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ: 29-08-2024 ರೊಳಗೆ ಕಳುಹಿಸಿಕೊಡಬೇಕು. ದಿನಾಂಕ: 29-08-2024 ರ ನಂತರ ಡಿ.ಡಿ ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರೆಗ ರೂ. 500/-, ಪ.ಜಾ./ಪ.ಪಂ/ಪ್ರವರ್ಗ-1 ರವರೆಗೆ ರೂ. 250/- ಅಗಿದ್ದು, ರಾಷ್ಟ್ರೀಕೃತ ಬ್ಯಾಂಕ್‌ಗಳ (Nationalized Bank) Comptroller, KSNUAHS, Shivamogga-577 412 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು ಕುಲಸಚಿವರು, ಕಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಅವರಣ 577412 ಇಲ್ಲಿಗೆ ದಿನಾಂಕ:29-08-2024 (ಸಂಜೆ 14 ಗಂಟೆ) ಒಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು.

ದಿನಾಂಕ 29-08-2024 ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಪ್ರವೇಶ ಮತ್ತು ಆಯ್ಕೆ ವಿಧಾನ: ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯನ್ನು ಅಳಪಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್ ಸೈಟ್ ಮುಖಾಂತರ ತಿಳಿಸಲಾಗುವುದು.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!