spot_img
Saturday, July 19, 2025
spot_img

ಆಗಸ್ಟ್ 3 ರವರೆಗೆ ರಾಜ್ಯದಾದ್ಯಂತ ಭಾರಿ ಮಳೆ | ಕೆಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ !

ಜನಪ್ರತಿನಿಧಿ(ಬೆಂಗಳೂರು) : ಒಂದೆಡೆ ಕೇರಳದಲ್ಲಿ ಭೀಕರ ಭೂಕುಸಿತವಾಗಿದ್ದು, ಇನ್ನೊಂದೆಡೆ ಶಿರಾಡಿ ಘಾಟ್‌ನಲ್ಲಿಯೂ ಮನಕಲಕುವ ರೀತಿಯಲ್ಲಿ ಗುಡ್ಡ ಕುಸಿದಿದೆ. ರಾಜ್ಯದ ಹಲವೆಡೆ ಮುಂದಿನ ಕೆಲ ದಿನಗಳಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಗುಜರಾತ್, ಕರ್ನಾಟಕ, ಮಹಾರಾಷ್ಟ್ರ, ಕೇರಳದ ಕಡಲ ತೀರದಲ್ಲಿ ಪ್ರಕ್ಷುಬ್ಧತೆ  ಮುಂದುವರೆಯಲಿದ್ದು, ಕರಾವಳಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದೇ ರೀತಿ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 3 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಆಗಸ್ಟ್ 3 ರವರೆಗೆ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್ 1 ರಂದು ಆರೆಂಜ್ ಅಲರ್ಟ್, ಆಗಸ್ಟ್ 2, 3 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 1 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್ 2, 3 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಆಗಸ್ಟ್ 1 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಆಗಸ್ಟ್ 1, 2 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಆದೇಶಿಸಲಾಗಿದೆ. ಕರ್ನಾಟಕ ರಾಜ್ಯಾದ್ಯಂತ ಬೀಸುವ ಗಾಳಿಯ ವೇಗ 30-40 ಕಿಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!