spot_img
Wednesday, January 22, 2025
spot_img

ಕೋಟ ಸಹಕಾರಿ ವ್ಯವಸಾಯಕ ಸಂಘ: ನಿವೃತ್ತ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಸನ್ಮಾನ

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘ ನಿ. ಕೋಟ, ಇವರ ಆಶ್ರಯದಲ್ಲಿ ಜೂನ್ ೩೦ರಂದು ನಿವೃತ್ತರಾಗಿರುವ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್. ವಿ. ಇವರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ಸಂಘದ ಪ್ರಧಾನ ಕಛೇರಿಯ ಬಿ. ಸಿ. ಹೊಳ್ಳ ಸಹಕಾರ ಸಭಾಭವನದಲ್ಲಿ ಜರಗಿತು.

ಸಂಘದ ಅಧ್ಯಕ್ಷರಾದ ಡಾ| ಕೃಷ್ಣ ಕಾಂಚನ್ ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೀತಾನಂದ ಫೌಂಡೇಶನ್ (ರಿ) ಮಣೂರು ಇದರ ಪ್ರವರ್ತಕರಾದ ಆನಂದ ಸಿ. ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಹಾಗೂ ಸನ್ಮಾನಿತರ ಕಾರ್ಯ ವೈಖರಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ವಿಶ್ವವಿನಾಯಕ ವಿವಿಧೋದ್ದೇಶ ಸಹಕಾರ ಸಂಘ (ನಿ) ಕೋಟ ಇದರ ಅಧ್ಯಕ್ಷರಾದ ಡಾ| ಎಚ್. ವಿ. ಸೋಮಯಾಜಿ, ಮೂರ್ತೆದಾರರ ಸೇವಾ ಸಹಕಾರಿ ಸಂಘ (ನಿ) ಕೋಟ ಇದರ ಅಧ್ಯಕ್ಷರಾದ ಕೊರಗ ಪೂಜಾರಿ, ಪ್ರೇಮ ಕ್ಲಿನಿಕ್, ತೆಕ್ಕಟ್ಟೆ ಇದರ ವೈದ್ಯರಾದ ಡಾ. ಕುಸುಮಾಕರ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ಜಿ. ರಾಜೀವ ದೇವಾಡಿಗ, ನಿರ್ದೇಶಕರಾದ ಜಿ. ತಿಮ್ಮ ಪೂಜಾರಿ, ಟಿ. ಮಂಜುನಾಥ, ಉದಯ ಕುಮಾರ ಶೆಟ್ಟಿ, ರವೀಂದ್ರ ಕಾಮತ್, ಮಹೇಶ ಶೆಟ್ಟಿ, ಎಚ್. ನಾಗರಾಜ ಹಂದೆ, ರಾಜೇಶ ಉಪಾಧ್ಯ, ರಂಜಿತ್ ಕುಮಾರ, ಗೀತಾ ಶಂಭು ಪೂಜಾರಿ, ಪ್ರೇಮಾ ಎಸ್. ಪೂಜಾರಿ, ರಶ್ಮಿತಾ, ಶ್ರೀಕಾಂತ ಶೆಣೈ, ಭಾಸ್ಕರ ಶೆಟ್ಟಿ, ಅಚ್ಯುತ ಪೂಜಾರಿ, ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ. ಶೋಭಾ ಇವರು ಮುಖ್ಯ ಅತಿಥಿಗಳಾಗಿ ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅರುಣ್ ಕುಮಾರ್ ಎಸ್. ವಿ. ಇವರನ್ನು ಸಭಾ ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಹಾಗೂ ಸ್ಥಳೀಯ ಸಹಕಾರಿ ಸಂಘಗಳ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸನ್ಮಾನಿತರ ಕುರಿತು ಸಂಘದ ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರಾದ ಜಿ. ತಿಮ್ಮ ಪೂಜಾರಿಯವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷರಾದ ಡಾ| ಕೃಷ್ಣ ಕಾಂಚನ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸನ್ಮಾನಿತರೊಂದಿಗಿನ ಒಡನಾಟದ ಕುರಿತು ತಿಳಿಸಿ, ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿರುವ ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರು, ನಿರ್ದೇಶಕರು, ಮುಖ್ಯಕಾರ್ಯನಿರ್ವಹಣಾಧಿಕಾರಿಯವರು, ಸಂಘದ ಸಲಹಾ ಸಮಿತಿ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ನಿವೃತ್ತ ಮತ್ತು ಹಾಲಿ ಸಿಬ್ಬಂದಿಯವರು, ಆಭರಣ ಬೆಲೆ ನಿರ್ಣಾಯಕರು, ಭಾಗ್ಯನಿಧಿ ಸಂಗ್ರಾಹಕರು ಉಪಸ್ಥಿತರಿದ್ದರು.
ಸಂಘದ ನಿರ್ದೇಶಕರಾದ ಟಿ. ಮಂಜುನಾಥ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಸಿಬ್ಬಂದಿ ಶಾಲಿನಿ ಹಂದೆ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!