spot_img
Tuesday, March 31, 2026
spot_img

ಕುಂದಾಪುರ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಯು.ಬಿ ನಂದಕುಮಾರ್ ನಿವೃತ್ತಿ: ಬೀಳ್ಕೋಡುಗೆ

ಕುಂದಾಪುರ: ಕುಂದಾಪುರದ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಯು.ಬಿ ನಂದಕುಮಾರ್ ಅವರು ಪೊಲೀಸ್ ಇಲಾಖೆಯಲ್ಲಿ 31 ವರ್ಷಗಳ ಸುಧೀರ್ಘಕಾಲ ಸೇವೆ ಸಲ್ಲಿಸಿ ಜು.31-2024 ರಂದು ನಿವೃತ್ತಿ ಹೊಂದಿದ್ದು ಇವರ ಬೀಳ್ಕೊಡುಗೆ ಕಾರ್ಯಕ್ರಮ ಕುಂದಾಪುರದ ಮೊಗವೀರ ಸಭಾಭವನದಲ್ಲಿ ನಡೆಯಿತು.

ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಬೆಳ್ಳಿಯಪ್ಪ .ಕೆ .ಯು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರೊಬೆಷನರಿ ಡಿವೈ‌ಎಸ್ಪಿ ಗೀತಾ ಪಾಟೀಲ್ ಹಾಗೂ ಕುಂದಾಪುರ ಉಪ ವಿಭಾಗದ ವಿವಿಧ ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಯು.ಬಿ ನಂದಕುಮಾರ್ ದಂಪತಿಯನ್ನು ಸನ್ಮಾನಿಸಲಾಯಿತು. ಕುಂದಾಪುರ ಠಾಣೆಯಲ್ಲಿ ಒಂದುವರೆ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು ಆ ಸಮಯದಲ್ಲಿ ತುಂಬಾ ಕ್ಲಿಷ್ಟಕರ ಪ್ರಕರಣಗಳನ್ನು ಭೇದಿಸುವಲ್ಲಿ ಮತ್ತು ನೂರಕ್ಕೂ ಹೆಚ್ಚು ಕಳೆದುಕೊಂಡ ಮೊಬೈಲನ್ನು ಪತ್ತೆ ಹಚ್ಚಿ ವಾರಿಸುದಾರರಿಗೆ ಹಿಂದಿರುಗಿಸಿರುವುದು ಶ್ಲಾಘನೀಯ ಕೆಲಸವಾಗಿದೆ. ಇವರು 1993ನೇ ಇಸವಿನಲ್ಲಿ ಪೊಲೀಸ್ ಇಲಾಖೆಗೆ ಸೇರಿ ಗುಪ್ತಚರ, ಕರಾವಳಿ ಕಾವಲು ಪಡೆ ಹಾಗೂ ಮುಂತಾದ ವಿಭಾಗಗಳಲ್ಲಿ ಸೇವೆ ಸಲ್ಲಿಸಿದು, ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಮಾನ್ಯ ಮುಖ್ಯಮಂತ್ರಿಗಳ ಪದಕವನ್ನು ನೀಡಿ ಗೌರವಿಸಲಾಗಿದೆ.

ಎ‌ಎಸ್‌ಐ ಆನಂದ್ ಸ್ವಾಗತಿಸಿ, ಮಧುಸೂದನ್ ಕಾರ್ಯಕ್ರಮ ನಿರ್ವಹಿಸಿದರು. ಪಿ‌ಎಸ್‌ಐ ಪುಷ್ಪ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!