spot_img
Saturday, May 16, 2026
spot_img

ಕುಂದಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ‘ಮೈಸೂರು ಚಲೋ’ ಪ್ರತಿಭಟನೆಗೆ ಪೂರ್ವಭಾವಿ ಸಭೆ

ಕುಂದಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈಸೂರು ಚಲೋ ನಡೆಸಲು ರಾಜ್ಯ ಬಿಜೆಪಿಯ ಸೂಚನೆಯ ಮೇರೆಗೆ ಆಗಸ್ಟ್ 3 ಮೈಸೂರಿನಿಂದ ಆರಂಭಗೊಳ್ಳಲಿರುವ ಪಾದಯಾತ್ರೆಯ ಪೂರ್ವಭಾವಿ ಸಭೆ ಕುಂದಾಪುರ ಮಂಡಲದ  ಬಿಜೆಪಿಯ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
 ಸಭೆಯ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲದ ಬಿಜೆಪಿ ಕ್ಷೇತ್ರಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದರು.
ಈ ಪ್ರತಿಭಟನೆಯ ಪೂರ್ವ ಮಾಹಿತಿಯನ್ನು ಬಿಜೆಪಿಯ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಇವರು ವಿವರಿಸಿ ರಾಜ್ಯ ಬಿಜೆಪಿಯ ಸೂಚನೆಯಂತೆ  ಆಗಸ್ಟ್ 3ರಂದು ಪಾದಯಾತ್ರೆ ಆರಂಭಗೊಂಡು ಈ ಪಾದಯಾತ್ರೆಯು ಆಗಸ್ಟ್ 10ರ ತನಕ ನೆರವೇರಲಿದೆ. ಮತ್ತು ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ, ಕುಂದಾಪುರದಿಂದ  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ  ಸಭೆಯಲ್ಲಿ ವಿನಂತಿಸಿದರು.
 ಸಭೆಯಲ್ಲಿ ಬಿಜೆಪಿ ನಿಕಟ ಪೂರ್ವ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ, ಬಿಜೆಪಿ ಕುಂದಾಪುರ ಮಂಡಲದ ಪದಾಧಿಕಾರಿಗಳು, ಹಾಗೂ  ವಿವಿಧ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಪ್ರಮುಖರು ಉಪಸ್ಥಿತರಿದ್ದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್  ಸ್ವಾಗತಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!