spot_img
Saturday, February 14, 2026
spot_img

ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆ| ಶೇ.10 ಡಿವಿಡೆಂಡ್ ಘೊಷಣೆ

ಹೆಮ್ಮಾಡಿ: ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಶನಿವಾರ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಕೆ ಸಾಧು ಎಸ್ ಬಿಲ್ಲವ ಮಾತನಾಡಿ ಸಂಘ ಸಾಲ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ ಸುಸ್ತಿ ಸಾಲಗಳ ಪ್ರಮಾಣವನ್ನು ಕಡಿಮೆ ಮಾಡಲು ಮತ್ತು ಸಂಘದ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಆಡಳಿತ ಮಂಡಳಿ ನಿರ್ಧರಿಸಿದೆ. ಜಾಗ ಖರೀದಿಸಿದ ಸ್ಥಳದಲ್ಲಿ ಸ್ವಂತ ಕಟ್ಟಡ ನಿರ್ಮಿಸಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದರು.

ಪ್ರಗತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಹೆಮ್ಮಾಡಿ 2023-24ನೇ ಸಾಲಿನಲ್ಲಿ 15,68,446.95 ರೂ. ನಿವ್ವಳ ಲಾಭ ಗಳಿಸಿದ್ದು ಸಂಘದ ಸದಸ್ಯರಿಗೆ ಶೇ.10 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಸಾಧು ಎಸ್ ಬಿಲ್ಲವ ತಿಳಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಅರುಣ್ ಕುಮಾರ್ ಎಸ್.ವಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಹಕಾರ ಇಲಾಖೆಯಲ್ಲಿ 36 ವರ್ಷ 8 ತಿಂಗಳುಗಳ ಕಾಲ ದಕ್ಷತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಶ್ರೀಯುತ ಅರುಣ್ ಕುಮಾರ್ ಎಸ್.ವಿ ಹಾಗು ಅವರ ಪತ್ನಿ ಜಯಲಕ್ಷ್ಮೀಯವರನ್ನು ಸಮ್ಮಾನಿಸಲಾಯಿತು. ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

ಸಂಘದ ಉಪಾಧ್ಯಕ್ಷರಾದ ಕುಸುಮ ಆರ್ ಮೊಗವೀರ, ನಿರ್ದೇಶಕರುಗಳಾದ ಪದ್ಮಾವತಿ ಶೆಟ್ಟಿ, ಶೋಭಾ ಜಿ ಪುತ್ರನ್, ಜಯಲಕ್ಷ್ಮೀ ಎಸ್.ರಾವ್, ಆಸಿಯಾಭಾನು, ಭಾರತಿ, ಶಾರದ, ನೇತ್ರಾವತಿ, ಲೀಲಾವತಿ ಗಾಣಿಗ, ಪ್ರತಿಮಾ ವರ್ಗಿಸ್, ಗೀತಾ ಡಿ.ಹೆಚ್ ಉಪಸ್ಥಿತರಿದ್ದರು.

ಸಂಘದ ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಕುಲಾಲ್ ಹೆಮ್ಮಾಡಿ ವರದಿ ವಾಚಿಸಿದರು. ಶಿವರಾಮ್ ಕಾರ್ಯಕ್ರಮ ನಿರ್ವಹಿಸಿ, ಹಾಗೂ ಪ್ರಾರ್ಥನೆ ಲಲಿತಾ.ಕೆ ಪ್ರಾರ್ಥನೆ ಮಾಡಿದರು. ಶ್ರೀದೇವಿ ಸ್ವಾಗತಿಸಿ, ಅಭಿಜಿತ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!