spot_img
Tuesday, March 31, 2026
spot_img

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಲ್ಲಿ ಮನವಿ -ಬಿ ವೈ ರಾಘವೇಂದ್ರ

ದೆಹಲಿ: ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಆ.1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ ಮಾಡಲು ಮನವಿ ಮಾಡಿದರು.

ಸುಮಾರು 1200 ವರ್ಷಗಳ ಇತಿಹಾಸವಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿರುತ್ತದೆ. ಭಾರತದ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ.

ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ ಸ್ವಚ್ಛತೆ, ಶಂಕರಾಚಾರ್ಯ ಥೀಮ್ ಪಾರ್ಕ್, ಮಲ್ಟಿಲೆವೆಲ್ ಪಾರ್ಕಿಂಗ್, ವಿಮಾನ, ರೈಲ್ವೆ, ಬಸ್ ಹಾಗೂ ಬಂದರು ಸಂಪರ್ಕ, ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಸ್ಥಾಗಳ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗಂಗಾವಳಿ ನದಿ ಅಭಿವೃದ್ಧಿ ಸಹಿತ ಹಲವು ಯೋಜನೆಗಳನ್ನೊಳಗೊಂಡ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ಮಂಜೂರು ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಕೃಷ್ಣ ಪ್ರಸಾದ ಅಡ್ಯಂತಾಯ, ವೆಂಕಟೇಶ್ ಕಿಣಿ ಬೈಂದೂರು ಉಪಸ್ಥಿತರಿದ್ದರು.

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣದ ಬಗ್ಗೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಸಂಸದರ ಕಛೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!