spot_img
Tuesday, March 31, 2026
spot_img

ನೆರೆಹಾನಿ ಪ್ರದೇಶಕ್ಕೆ ನ್ಯಾಯಾಧೀಶರ ಭೇಟಿ

ಕುಂದಾಪುರ, ಆ.1: ಮಳೆ ಹಾನಿಗೀಡಾದ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಡಾಡಿ ಮತ್ಯಾಡಿ ಗ್ರಾಮದ ಗುಡ್ಡಟ್ಟುವಿಗೆ ಗುರುವಾರ ಹಿರಿಯ ಸಿವಿಲ್ ನ್ಯಾಯಾಧೀಶ, ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ರಾಜು ಎನ್. ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶೆ, ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಮಂಜುಳ ಬಿ. ಅವರು ಭೇಟಿ ನೀಡಿದರು.

ಅತಿ ಮಳೆಯಿಂದ ಹಾನಿಗೊಳಗಾದ ಗುಡ್ಡಟ್ಟುವಿನ ದೇವಿ ಸೀತಾರಾಮ ಆಚಾರ್, ನಾಗರಾಜ್, ಬಾಬು ರಾಯ್, ತಾರಾ ಆಚಾರ್ ಅವರ ಮನೆಗಳಿಗೆ ಭೇಟಿ ನೀಡಿ ಊಟೋಪಚಾರದ ವ್ಯವಸ್ಥೆಗೆ ಸೂಚಿಸಿ, ರಾತ್ರಿ ಪಂಚಾಯತ್ ನೀಡುವ ವಸತಿ ವ್ಯವಸ್ಥೆಗೆ ತೆರಳುವಂತೆ, ನೆರೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿಕೊಡುವಂತೆ ಸೂಚಿಸಿದರು. ಪುರಸಭೆ ವ್ಯಾಪ್ತಿಯ ಖಾರ್ವಿಕೇರಿಯ ರಿಂಗ್ ರೋಡ್‌ನಲ್ಲಿ ನೀರು ಹರಿದು ಹೋಗಲು ಸೂಕ್ತ ಪೈಪ್ ವ್ಯವಸ್ಥೆ ಮಾಡುವಂತೆ ಆದೇಶಿಸಿದರು. ನೆರೆ ಹಾನಿ ಸಂದರ್ಭ ಸಂತ್ರಸ್ತರಿಗೆ ಸೂಕ್ತ ಕಾನೂನು ನೆರವು, ಮಾಹಿತಿ ನೀಡುವ ಹಾಗೂ ಪರಿಹಾರ ಕಾರ್ಯಾಚರಣೆಯಲ್ಲಿ ಸರಕಾರಿ ಹಾಗೂ ಸರಕಾರೇತರ ಸಂಸ್ಥೆಗಳ ಜತೆ ಸಮನ್ವಯ ಸಾಧಿಸುವ ಸಲುವಾಗಿ ಭೇಟಿ ನೀಡಲಾಗಿತ್ತು.

ತಹಶೀಲ್ದಾರ್ ಶೋಭಾಲಕ್ಷ್ಮೀ, ಉಪತಹಶೀಲ್ದಾರ್ ವಿನಯ್, ವಕೀಲರ ಸಂಘದ ಅಧ್ಯಕ್ಷ ಹಂದಟ್ಟು ಪ್ರಮೋದ್ ಹಂದೆ, ಪ್ರಧಾನ ಕಾರ್ಯದರ್ಶಿ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ, ಕಂದಾಯ ನಿರೀಕ್ಷಕ ದಿನೇಶ್, ವಿ‌ಎ ವಿಶ್ವನಾಥ, ಪಂಚಾಯತ್ ಉಪಾಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಅಭಿವೃದ್ಧಿ ಅಧಿಕಾರಿ ಚಂದ್ರಕಾಂತ ಬಿ., ಕುಂದಾಪುರ ಎಸ್‌ಐ ಪುಷ್ಪ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!