Monday, September 9, 2024

ಬಿಜೆಪಿ-ಜೆಡಿಎಸ್‌ ಮೈಸೂರು ಚಲೋ ಪಾದಯಾತ್ರೆಗೆ ಬೆಂಗಳೂರಿನಲ್ಲಿ ಅನುಮತಿ ಇಲ್ಲ : ಪೊಲಿಸ್ ಆಯುಕ್ತ ಬಿ. ದಯಾನಂದ್

ಜನಪ್ರತಿನಿಧಿ (ಬೆಂಗಳೂರು): ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಳೆ(ಶನಿವಾರ)ಯಿಂದ ಹಮ್ಮಿಕೊಂಡಿರುವ ʼಮೈಸೂರು ಚಲೋʼ ಪಾದಯಾತ್ರೆಗೆ ಸಂಬಂಧಿಸಿದಂತೆ ಅನುಮತಿ ಪಡೆದುಕೊಂಡಿಲ್ಲ.  ಬೆಂಗಳೂರು ನಗರದಲ್ಲಿ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲಿಸ್ ಆಯುಕ್ತ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ.

ಪಾದಯಾತ್ರೆ ಎಲ್ಲಿಂದ, ಯಾವ ರೀತಿ ಆರಂಭಿಸುತ್ತಾರೆ ಎನ್ನುವ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ನಗರದಲ್ಲಿ ಪ್ರತಿಭಟನೆಗೆ, ರ‍್ಯಾಲಿಗೆ, ಪಾದಯಾತ್ರೆಗೆ ಯಾವುದೇ ಅನುಮತಿ ಇಲ್ಲ. ಹೈಕೋರ್ಟ್ ಆದೇಶದ ಅನ್ವಯ ಅನುಮತಿ ಇಲ್ಲ. ಆದರೂ ಪೂರಕವಾಗಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ನನ್ನ ಮಟ್ಟದಲ್ಲಿ ಯಾರೂ ಬಂದು ಇದುವರೆಗೆ ಅನುಮತಿ ಕೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ಸಂಬಂಧಿಸಿದಂತೆ ಬಿಜೆಪಿ  ಹಾಗೂ ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಪಾದಯಾತ್ರೆಗೆ ನಾವು ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವರು ಹೇಳಿದ್ದರು. ಇದೀಗ ನಗರ ಪೊಲೀಸ್ ಆಯುಕ್ತರೂ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

ಇನ್ನು, ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪೂರ್ವ ನಿಗದಿಯಂತೆ ನಾಳೆ (ಶನಿವಾರ) ಮೈಸೂರಿಗೆ ಪಾದಯಾತ್ರೆ ಆರಂಭವಾಗಲಿದೆ. ಸಣ್ಣಪುಟ್ಟ ಗೊಂದಲ ಇದ್ದರೂ ಪಾದಯಾತ್ರೆ ನಡೆಯಲಿದೆ. ಶನಿವಾರ ಬೆಳಗ್ಗೆ 8.30ಕ್ಕೆ‌ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಆರಂಭಗೊಳ್ಳಲಿದೆ. ಕುಮಾರಸ್ವಾಮಿಯೇ ಪಾದಯಾತ್ರೆಗೆ ಚಾಲನೆ ನೀಡುತ್ತಾರೆ  ತಿಳಿಸಿದ್ದಾರೆ.

We are resolute in our commitment to continue this fight until the justice is delivered : Vijayendra Yediyurappa

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!