Wednesday, September 11, 2024

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಷಡ್ಯಂತ್ರಗಳ ವಿರುದ್ಧ ನಮ್ಮ ಹೋರಾಟ : ಡಿ.ಕೆ. ಶಿವಕುಮಾರ್‌

ಜನಪ್ರತಿನಿಧಿ (ಬೆಂಗಳೂರು) : ಪ್ರಜಾಪ್ರಭುತ್ವದ ಉಳಿವಿಗಾಗಿ ಇಂದು ಪವಿತ್ರ ಜನಾಂದೋಲನ ಕಾರ್ಯಕ್ರಮವನ್ನು ನಡೆಸುತ್ತಿದ್ದೇವೆ. ಭ್ರಷ್ಟಾಚಾರಿಗಳ ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರಿಗೆ ಅವರ ಕಾಲದಲ್ಲಿ ಆಗಿರುವ ಅಕ್ರಮ, ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ, ಸಂವಿಧಾನ ಸಂಸ್ಥೆಗಳ ದುರ್ಬಳಕೆ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯಕ್ಕೆ ಮಲತಾಯಿ ಧೋರಣೆ ತೋರುತ್ತಿರುವ ಕೇಂದ್ರ NDA ಸರ್ಕಾರ ಹಾಗೂ ಬಿಜೆಪಿಯ 21 ಭ್ರಷ್ಟಾಚಾರಗಳ ವಿರುದ್ಧ ಬಿಡದಿಯಲ್ಲಿ ಇಂದು ಹಮ್ಮಿಕೊಂಡಿದ್ದ ಜನಾಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಆಗಿರುವ ಹಗರಣ, ಅನ್ಯಾಯಗಳ ಬಗ್ಗೆ ಪ್ರಶ್ನೆ ಮಾಡಿ ಜನರಿಗೆ ತಿಳಿಸುತ್ತೇವೆ. ನಮ್ಮ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು. ಬಿಡದಿಯಿಂದ ಮೈಸೂರಿನವರೆಗೆ ನಮ್ಮ ಈ ಜನಾಂದೋಲನ ನಡೆಯಲಿದ್ದು, ಬಿಜೆಪಿಯವರು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಯಾವ ರೀತಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಜನರಿಗೆ ತಿಳಿಸುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಷಡ್ಯಂತ್ರಗಳು ನಡೆಯದು, ಇದರ ವಿರುದ್ದ ನಮ್ಮ ಹೋರಾಟ ನಿರಂತರ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!