spot_img
Friday, May 15, 2026
spot_img

ವಡ್ದರ್ಸೆ ಸ.ಹಿ.ಪ್ರಾ ಶಾಲೆಯಲ್ಲಿ ನಿವೃತ್ತ ಶಿಕ್ಷಕಿಗೆ ಅಭಿನಂದನಾ ಕಾರ್ಯಕ್ರಮ

ಕೋಟ: ಸುಮಾರು ೨೬ ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಶ್ರೀಮತಿ ಹೇಮಲತಾ ಕೆ ಇವರಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ಡರ್ಸೆಯಲ್ಲಿ ಜು.೩೧ರಂದು ಅಭಿನಂದನಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ದಯಾನಂದ್ ಆಚಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಹಾಬಲ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಶ್ರೀನಿವಾಸ್ ವಡ್ದರ್ಸೆ, ನಿವೃತ್ತ ಶಿಕ್ಷಕರಾದ ಮಂಜಯ್ಯ ಶೆಟ್ಟಿ, ಜೆಸಿ‌ಐ ಸಾಲಿಗ್ರಾಮ ವಡ್ಡರ್ಸೆ ಸಿಟಿಯ ಪದ್ಮನಾಭ ಆಚಾರ್ಯ, ವಡ್ಡರ್ಸೆ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ ದೇವಿ, ಪ್ರೌಢಶಾಲಾ ಸಹ ಶಿಕ್ಷಕರು, ಪೋಷಕರು ಊರವರು ಉಪಸ್ಥಿತರಿದ್ದರು.

ಈ ಶಾಲೆಯಲ್ಲಿ ಮೂರು ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಅವರಿಗೆ ಅಭಿಮಾನದಿಂದ ಶಾಲೆಯ ಶಿಕ್ಷಕ ವೃಂದದವರ ವತಿಯಿಂದ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ, ಪೋಷಕರ ವತಿಯಿಂದ, ಪ್ರೌಢಶಾಲಾ ಶಿಕ್ಷಕರ ವತಿಯಿಂದ, ಹಳೆ ವಿದ್ಯಾರ್ಥಿಗಳ ವತಿಯಿಂದ ಸನ್ಮಾನ ಜರುಗಿತು.

ಸನ್ಮಾನಗೊಂಡ ಶಿಕ್ಷಕಿ ವಡ್ಡರ್ಸೆಯ ಜನತೆಯು ತೋರಿದ ಶಿಕ್ಷಕರ ಬಗೆಗಿನ ಅಭಿಮಾನ, ಗೌರವಾದರಗಳನ್ನು ಮನ ತುಂಬಿ ಬಣ್ಣಿಸಿದರು.

ಕಾರ್ಯಕ್ರಮವನ್ನು ಸಹಶಿಕ್ಷಕಿ ಯಶೋಧ ನಿರೂಪಿಸಿ, ಮುಖ್ಯ ಶಿಕ್ಷಕಿ ಗಿರಿಜಾ ಸ್ವಾಗತಿಸಿ, ಸಹ ಶಿಕ್ಷಕಿ ಮೀನಾಕ್ಷಿಯವರು ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!