Wednesday, September 11, 2024

ವಯನಾಡಿನಲ್ಲಿ ಕಾಂಗ್ರೆಸ್‌ ನಿಂದ 100ಕ್ಕೂ ಹೆಚ್ಚು ಮನೆಗಳ ನಿರ್ಮಾಣ : ರಾಗಾ ಭರವಸೆ

ಜನಪ್ರತಿನಿಧಿ (ವಯನಾಡು) : ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತ, ಭೀಕರ ದುರಂತವಾಗಿದ್ದು, ಇದನ್ನು ವಿಭಿನ್ನವಾಗಿ ಪರಿಗಣಿಸಬೇಕು ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು(ಶುಕ್ರವಾರ) ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಇತರ ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಜಿಲ್ಲಾಡಳಿತ ಮತ್ತು ಪಂಚಾಯತ್‌ನ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ವರದಿಗಾರರಿಗೆ ಸ್ಪಂದಿಸಿದ ರಾಹುಲ್ ಗಾಂಧಿ, ಈ ವಿಷಯವನ್ನು ದೆಹಲಿಯಲ್ಲಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಪ್ರಸ್ತಾಪಿಸಲಿದ್ದೇನೆ. ಇದು ವಿಭಿನ್ನ ಹಂತದ ದುರಂತವಾಗಿದ್ದು, ವಿಭಿನ್ನವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಇನ್ನು, ವಯನಾಡಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಂತ್ರಸ್ತರಿಗೆ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಅವರು ಭರವಸೆ ನೀಡಿದರು.

The Congress family is committed to building over 100 houses here : Rahul Gandhi

ರಾಹುಲ್‌ ಗಾಂಧಿಗೆ ವಯನಾಡಿನಲ್ಲಿ ಸಂಭವಿಸಿದ ಈ ಭಾರಿ ಪ್ರಮಾಣದ ಗುಡ್ಡ ಕುಸಿತದ ಬಗ್ಗೆ ಹಾಗೂ ವಿಪತ್ತು ನಿರ್ವಹಣಾ ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.

ನಿನ್ನೆ(ಗುರುವಾರ) ಕೇರಳದ ವಯನಾಡಿಗೆ ಆಗಮಿಸಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ, ಗುಡ್ಡ ಕುಸಿತದ ಪರಿಣಾಮದಿಂದ ಉಂಟಾದ ವಿನಾಶದ ಪ್ರಮಾಣವನ್ನು ಪರಿಶೀಲಿಸಿ ಇದೊಂದು “ರಾಷ್ಟ್ರೀಯ ವಿಪತ್ತು” ಎಂದಿದ್ದಲ್ಲದೇ, ಈ ವಿಪತ್ತು ನಿರ್ವಹಣಾ ತುರ್ತು ಸಮಗ್ರ ಕ್ರಿಯಾ ಯೋಜನೆಗೆ ಅವರು ಒತ್ತಾಯಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!