Monday, September 9, 2024

ಬೈಂದೂರು ಕ್ಷೇತ್ರ ವ್ಯಾಪ್ತಿಯ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿ: ಕೇಂದ್ರ ಮೀನುಗಾರಿಕಾ ಇಲಾಖೆ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಗಂಟಿಹೊಳೆ

ಜನಪ್ರತಿನಿಧಿ (ನವ ದೆಹಲಿ) : ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ  ಕೇಂದ್ರ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ಹೇಮಂತ್ ಇವರನ್ನು ಭೇಟಿ ಮಾಡಿ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ ರೂ 85.00 ಕೋಟಿ ಮಂಜೂರಾಗಿದ್ದು, ಸಿ‌ಆರ್‌ಝೆಡ್ ಕ್ಲಿಯರೆನ್ಸ್ ಮಾಡಿ ಆದಷ್ಟು ಬೇಗ ಕಾಮಗಾರಿ ಕೈಗೊಳ್ಳಲು ಜೊತೆಗೆ ಗಂಗೊಳ್ಳಿ ಬಂದರು ಆಧುನಿಕರಣ, ಗಂಗೊಳ್ಳಿ ಕೋಸ್ಟಲ್ ಬರ್ತ್, ಕೊಡೇರಿ ಕಿರುಬಂದರು ಅಭಿವೃದ್ಧಿ, ಶಿರೂರು ಕಿರುಬಂದರು ಅಭಿವೃದ್ಧಿ, ಉಪ್ಪುಂದದಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಬ್ರೇಕ್ ವಾಟರ್ ಹಾಗೂ ಕಿರುಬಂದರು ನಿರ್ಮಾಣದ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಬೈಂದೂರಿನ ವೆಂಕಟೇಶ್ ಕಿಣಿ, ಸಮೃದ್ಧ ಬೈಂದೂರು ನಿಯೋಗ ಹಾಗೂ ಸಂಸದರ ದೆಹಲಿ ಕಛೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಬಂದರು ಇಲಾಖೆ ನಿರ್ದೇಶಕರು ಕೂಡಲೇ ಎಲ್ಲಾ ಯೋಜನೆಗಳನ್ನು ಅನುಮೋದನೆ ನೀಡುವುದಾಗಿ ತಿಳಿಸಿದ್ದಾರೆ ಎಂದು ಶಾಸಕರ ಕಛೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!