Monday, September 9, 2024

ಪಿಎಸ್‌ಐ ಪರಶುರಾಮ್‌ ಅನುಮಾನಸ್ಪದ ಸಾವು | ಯಾದಗಿರಿ ಶಾಸಕ ಮತ್ತು ಪುತ್ರನ ವಿರುದ್ಧ ದೂರು

ಜನಪ್ರತಿನಿಧಿ (ಯಾದಗಿರಿ) : ಯಾದಗಿರಿಯಲ್ಲಿ ಪಿಎಸ್ಐ ಪರಶುರಾಮ್‌ ಅನುಮಾನಸ್ಪದ ಸಾವಿನ ಸುತ್ತ ಹತ್ತಾರು ಪ್ರಶ್ನೆಗಳು ಎದ್ದಿವೆ. ಪಿಎಸ್ಐ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ವಿವಿಧ ಸಂಘಟನೆಗಳು ಒತ್ತಾಯ ಮಾಡಿವೆ.

ಖಾಸಗಿ ಆಸ್ಪತ್ರೆಯಿಂದ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ರವಾನಿಸುವ ಸಂದರ್ಭದಲ್ಲಿ ಆ್ಯಂಬುಲೆನ್ಸ್‌ ತೆಡೆದ ನೂರಾರು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಎಸ್‌ಪಿ ಮುಂದೆ  ಮೃತ ಪಿಎಸ್ಐ ಪರಶುರಾಮ್‌ ಪತ್ನಿ ಶ್ವೇತಾ, ನನ್ನ ಗಂಡನ ಸಾವಿಗೆ‌ ನ್ಯಾಯ ಸಿಗಬೇಕು ಎಂದು ಅವಲತ್ತುಕೊಂಡಿದ್ದಾರೆ.

ಇನ್ನು, ಈ ಸಂಬಂಧಿಸಿದಂತೆ ಪರಶುರಾಮ್‌ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದು, ಘಟನೆ ನಡೆದು 16 ಗಂಟೆಗಳಾದರೂ ಪ್ರಕರಣ ದಾಖಲಿಸಿಕೊಳ್ಳದೇ ಪೊಲೀಸರ ನಿರ್ಲಕ್ಷ್ಯ ಮಾಡಿದ್ದಾರೆಂದು ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 150 ರ ಮೇಲೆ ಡಿಎಸ್ ಎಸ್ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಪಡೆದಿದ್ದರು. ಪ್ರಕರಣ ದಾಖಲಿಸಿ ತಪ್ಪಿತಸ್ಥ ಶಾಸಕ ಚನ್ನಾರೆಡ್ಡಿ ಪಾಟೀಲ ಬಂಧಿಸುವಂತೆ ಪ್ರತಿಭಟನೆ ನಿರತರ ಒತ್ತಾಯ ಮಾಡಿದ್ದು, ಪ್ರತಿಭಟನೆಯ ಕಾರಣದಿಂದ ಹೆದ್ದಾರಿಯಲ್ಲಿ ಕಿಲೋಮೀಟರ್‌ ಗಟ್ಟಲೆ ಟ್ರಾಫಿಕ್‌ ಜಾಮ್‌ ಉಂಟಾಯಿತು.

ಶಾಸಕರ ವಿರುದ್ಧ ಪರಶುರಾಮ್‌ ಪತ್ನಿ ದೂರು : ಮೃತ ಪಿಎಸ್ ಐ ಪರಶುರಾಮ ಪತ್ನಿ ಶ್ವೇತಾ, ತಮ್ಮ ಪತಿಯ ಸಾವಿಗೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಪುತ್ರ ಪಂಪಣ್ಣಗೌಡ ಕಾರಣವೆಂದು ಯಾದಗಿರಿ ಎಸ್ಪಿ ಸಂಗೀತಾ ಅವರಲ್ಲಿ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೂರಿನಲ್ಲಿ ಪೋಸ್ಟಿಂಗ್ ಗಾಗಿ ಪದೇ ಪದೇ ಹಣಕ್ಕೆ ಕಿರುಕುಳ ನೀಡ್ತಿದ್ದ ಆರೋಪ ಮಾಡಿದ್ದಾರೆ. ಶಾಸಕನ ಕಿರುಕುಳದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಪತಿ ಸಾವನ್ನಪ್ಪಿದ್ದಾರೆ ಎಂದು ದೂರು ನೀಡಿದ್ದರು. ಸದ್ಯ ಯಾದಗಿರಿ ಏಮ್ಸ್ ಆಸ್ಪತ್ರೆ ಶವಾಗಾರಕ್ಕೆ ಪರಶುರಾಮ ಮೃತದೇಹ ರವಾನೆ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!