spot_img
Wednesday, April 1, 2026
spot_img

ಆ.5ಕ್ಕೆ ಹೆಮ್ಮಾಡಿಯಲ್ಲಿ ಕುಂದಾಪ್ರ ಕನ್ನಡ ಹಬ್ಬ ‘ಗಜ್ಮೈಕ್-2024’

ಹೆಮ್ಮಾಡಿ: ಶ್ರೀ ವಿ.ವಿ.ವಿ ಮಂಡಳಿ ಹೆಮ್ಮಾಡಿ, ಸಮರ್ಪಣಾ ಎಜುಕೇಶನ್ ಟ್ರಸ್ಟ್ ಹೆಮ್ಮಾಡಿ, ಶುಭದಾ ಎಜುಕೇಶನಲ್ ಟ್ರಸ್ಟ್ ಮಸ್ಕಿ ನಾವುಂದ, ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ವತಿಯಿಂದ ಕುಂದಾಪ್ರ ಕುಂದಾಪ್ರ ಕನ್ನಡ ಹಬ್ಬ ‘ಗಜ್ಮೈಕ್ 2024′ ಆಗಸ್ಟ್ 5ರಂದು ಹೆಮ್ಮಾಡಿಯ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.

ಜನತಾ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರು, ಜನತಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಲಿದ್ದಾರೆ. ಭಂಡಾರ್ಕಾಸ್ ಕಾಲೇಜು ರೆಡಿಯೋ ಕುಂದಾಪುರದ ಕಾರ್ಯಕ್ರಮ ನಿರ್ವಹಕಿ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕುಂದಾಪ್ರ ಕನ್ನಡ ಹಾಸ್ಯ ಕಲಾವಿದ ಚೇತನ್ ನೈಲಾಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಜನತಾ ಪದವಿಪೂರ್ವ ಕಾಲೇಜು ಶೈಕ್ಷಣಿಕ ಮಾರ್ಗದರ್ಶಕರಾದ ಚಿತ್ರಾ ಕಾರಂತ, ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ಹೆಮ್ಮಾಡಿ ಹಾಗೂ ಶುಭದ ಎಜುಕೇಶನಲ್ ಟ್ರಸ್ಟ್ ಮಸ್ಕಿ ನಾವುಂದ ಇದರ ಕಾರ್ಯದರ್ಶಿ ಶ್ಯಾಮಲಾ ಗಣೇಶ್, ಜನತಾ ಪ್ರೌಢಶಾಲೆ ಹೆಮ್ಮಾಡಿ ಇದರ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಜನತಾ ಪದವಿ ಪೂರ್ವ ಕಾಲೇಜು ಉಪ ಪ್ರಾಂಶುಪಾಲರಾದ ರಮೇಶ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಉಪಸ್ಥಿತರಿರಲಿದ್ದಾರೆ.

ಬಳಿಕ ‘ಶ್ಲಾಘನಾ ಶನಯ’ ಕಾಲೇಜಿನ ಸಾಂಸ್ಕೃತಿಕ ತಂಡದ ವಿದ್ಯಾರ್ಥಿಗಳಿಂದ ಗೌಜ್ ಗಮ್ಮತ್ ಕುಂದ ಕನ್ನಡದ ವಿಶೇಷ ಸಾಂಸ್ಕೃತಿಕ ವೈಭವ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!