Wednesday, September 11, 2024

ಸಹಕಾರಿ ಕ್ಷೇತ್ರಕ್ಕೆ ಜೀವ ತುಂಬಿದ ಮೊಳಹಳ್ಳಿ ಶಿವರಾಯರ ಸ್ಮರಣೆ ಅತ್ಯಗತ್ಯ-ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ದೊಡ್ಡ ಮಟ್ಟದಲ್ಲಿ ಬೆಳೆಯಲು ಮೊಳಹಳ್ಳಿ ಶಿವರಾಯರ ದೂರದರ್ಶಿತ್ವ ಕಾರಣ. ಅವರು ತಮ್ಮ ಹುಟ್ಟೂರಿನಲ್ಲಿ ಸ್ಥಾಪನೆ ಮಾಡಿದ ಸಹಕಾರಿ ಕ್ಷೇತ್ರ ರಾಜ್ಯದ ಉದ್ದಗಲಕ್ಕೆ ವಿಸ್ತರಿಸಿದೆ. ಆ ಕಾಲದಲ್ಲಿ ಎತ್ತಿನ ಗಾಡಿಯಲ್ಲಿ ಸುತ್ತಾಡಿ ಸಹಕಾರಿ ಕ್ಷೇತ್ರವನ್ನು ಎಲ್ಲೆಡೆ ವಿಸ್ತರಿಸಿದ್ದಾರೆ. ಇದರ ಫಲವಾಗಿ ಜಿಲ್ಲೆಯ ಸಹಕಾರಿ ಕ್ಷೇತ್ರ ರಾಜ್ಯದಲ್ಲಿ ಹೆಸರು ಪಡೆದಿದೆ. ಮುಂದೆಯೂ ಸಹಕಾರಿಗಳು ಅವರು ತೋರಿದ ಮಾರ್ಗದರ್ಶನದಲ್ಲಿ  ಸಹಕಾರಿ ಕ್ಷೇತ್ರವನ್ನು ಮುನ್ನಡೆಸೋಣ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಇಲ್ಲಿನ ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾಯ ಅವರ 144 ನೇ ಜನ್ಮ ದಿನದ ಅಂಗವಾಗಿ  ಮೊಳಹಳ್ಳಿ ಶಿವರಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅವರು ಮಾತಾಡಿ, ಮೊಳಹಳ್ಳಿ ಶಿವರಾಯರ ಆದರ್ಶ ನಮ್ಮೆಲ್ಲರಿಗೂ ಪ್ರೇರಣೆ ಆಗಿದೆ. ಜಿಲ್ಲೆಯ ಸಹಕಾರಿ ಕ್ಷೇತ್ರದ ಹಿರಿಯರಾದ ಮೊಳಹಳ್ಳಿ ಅವರನ್ನು ನಾವು ಸ್ಮರಿಸಬೇಕಿದೆ. ಡಾ.ಎಂ.ಎನ್.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಬ್ಯಾಂಕ್ ಇನ್ನಷ್ಟು ಸಾಧನೆ ಪಥದಲ್ಲಿ ಬ್ಯಾಂಕ್ ಮುನ್ನಡೆಯಲಿ ಎಂದರು.

ಕೆ.ಎಂ.ಎಫ್. ಅಧ್ಯಕ್ಷ ಸುಚರಿತ ಶೆಟ್ಟಿ ಅವರು ಮಾತಾಡಿ, ಮೊಳಹಳ್ಳಿ ಶಿವರಾಯರು ಹಾಕಿಕೊಟ್ಟ ಅಡಿಪಾಯದಿಂದ ಸಹಕಾರಿ ಕ್ಷೇತ್ರ ಬೆಳಗುತ್ತಿದೆ. ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಜನಮನ್ನಣೆ ಪಡೆದಿದೆ. ಮುಂದೆ ಸಹಕಾರಿ ಕ್ಷೇತ್ರ ಯಶಸ್ಸಿನ ಪಥದಲ್ಲಿ ನಡೆಯಲಿ ಎಂದರು.

ಸಮಾರಂಭದಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್‌ ಸೂರಿಂಜೆ, ನಿರ್ದೇಶಕರಾದ ಟಿ. ಜಿ ರಾಜರಾಮ್ ಭಟ್  ಭಾಸ್ಕರ್‌ ಎಸ್‌. ಕೋಟ್ಯಾನ್‌,  ಶಶಿಕುಮಾರ್‌ ರೈ ಬಿ., ಎಸ್‌.ಬಿ. ಜಯರಾಮ ರೈ , ರಾಜು ಪೂಜಾರಿ,  ಎಂ.ಮಹೇಶ್  ಹೆಗ್ಡೆ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಕೆ. ಜೈರಾಜ್‌ ಬಿ.ರೈ, ಸದಾಶಿವ ಉಳ್ಳಾಲ್,  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ , ಜನತಾ ಬಜಾರ್ ಅಧ್ಯಕ್ಷರಾದ ಪುರುಷೋತ್ತಮ ಭಟ್, ವಿಶ್ವಕರ್ಮ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದ ಹರೀಶ್ ಆಚಾರ್, ಆತ್ಮಶಕ್ತಿ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್,ಯೂನಿಯನ್ ಕಾರ್ಯದರ್ಶಿ ಎಸ್. ವಿ. ಹಿರೇಮಠ,  ನಿರ್ದೇಶಕಿ ಕೆ.ಸಾವಿತ್ರಿ ರೈ  ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ  ಗೋಪಾಲಕೃಷ್ಣ ಭಟ್ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!