Monday, September 9, 2024

ಗ್ರಾಮ ಸ್ವರಾಜ್ ಪರಿಕಲ್ಪನೆಯ ಕತ್ತುಹಿಸುಕುವ ಕೆಲಸ ಆಗುತ್ತಿದೆ : ರಮೇಶ್‌ ಶೆಟ್ಟಿ ವಕ್ವಾಡಿ ಆಕ್ರೋಶ

ಜನಪ್ರತಿನಿಧಿ(ಕುಂದಾಪುರ) : ಸದ್ಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಆಡಳಿತ ಮಂಡಳಿ ಇಲ್ಲದ ಕಾರಣ ಆಯಾ ಪಂಚಾಯತ್ ವ್ಯಾಪ್ತಿಯ ಅಧ್ಯಕ್ಷರು ಮತ್ತು ಸದಸ್ಯರ ಕೋರಿಕೆಯ ಮೇರೆಗೆ ಅವಶ್ಯಕತೆ ಇರುವ ಕಡೆ ಅನುದಾನ ಹಂಚಿಕೆ ಮಾಡಿ ಕಾಮಗಾರಿ ನಿರ್ವಹಣೆಯನ್ನು ನೀಡುವುದು ಸರಿಯಾದ ವ್ಯವಸ್ಥೆ ಆಗಿರುತ್ತದೆ. ಆದರೆ ಅಧಿಕಾರಿಗಳು ಗುತ್ತಿಗೆದಾರರ ಲಾಬಿಗೆ ಮಣಿದು ಲಾಭದಾಯಕ ಕೆಲಸಗಳಿಗೆ ಅನುದಾನ ಹಂಚಿಕೆ ಮಾಡಿ ಜನರ ಹಣವನ್ನು ದುಂದುವೆಚ್ಚ ಮಾಡುತ್ತಿದ್ದಾರೆ ಎಂದು ತಾಲೂಕು ಪಂಚಾಯತ್ ರಾಜ್ ಒಕ್ಕೂಟ (ಕುಂದಾಪುರ ವಲಯ)ದ ಸಂಚಾಲಕ ರಮೇಶ್‌ ಶೆಟ್ಟಿ ವಕ್ವಾಡಿ ಆರೋಪಿ ಮಾಡಿದ್ದಾರೆ.

ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರ ಚುನಾವಣೆ ನಡೆಯದೇ ಜನಪರ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ಕೇಂದ್ರ ಸರ್ಕಾರ 15 ನೇ ಹಣಕಾಸಿನ ಅನುದಾನವನ್ನು ನಿಲ್ಲಿಸಿಯೇ ಬಿಟ್ಟಿದೆ. ಈ ಬಗ್ಗೆ ಯಾರೂ ಕೂಡ ದ್ವನಿ ಎತ್ತುತ್ತಿಲ್ಲ. ನಿವೇಶನಕ್ಕೆ ಸಂಬಂಧಪಟ್ಟ ಸಭೆಗಳು, ತಾಲೂಕು ಕಛೇರಿಯಲ್ಲಿ ನಡೆಯುವ ಸಭೆಗಳಿಗೆ ಕೇವಲ ಪಿಡಿಓ ಗಳಿಗೆ ಮಾತ್ರ ಆಹ್ವಾನ ಮಾಡುತ್ತಿದ್ದು ಸ್ಥಳೀಯ ಸರಕಾರವನ್ನು ಸಂಪೂರ್ಣ ಕಡೆಗಣನೆ ಮಾಡಲಾಗುತ್ತಿದೆ. ಗ್ರಾಮ ಸ್ವರಾಜ್ ಪರಿಕಲ್ಪನೆಯ ಕತ್ತುಹಿಸುಕುವ ಕೆಲಸ ಆಗುತ್ತಿದೆ ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ಗ್ರಾಮಪಂಚಾಯತ್ ಕೆಲಸಗಳನ್ನು ಸಂಪೂರ್ಣವಾಗಿ ಕಡೆಗಣನೆ ಮಾಡುತ್ತಿದ್ದು, ತಿಂಗಳುಗಟ್ಟಲೆ ಕಾಮಗಾರಿಗಳ ಅಂದಾಜು ಪಟ್ಟಿಗೆ ಕಾಯಬೇಕಿದೆ. ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತಗಳು ಗ್ರಾಮಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯಗಳನ್ನು ಕಡೆಕಣಿಸುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮಧ್ಯೆ ಪ್ರವೇಶಿಸಿ ಸ್ಥಳೀಯ ಸಂಸ್ಥೆಗಳ ಬೇಡಿಕೆಗೆ ತಕ್ಕಂತೆ ಅನುದಾನ ಹಂಚಿಕೆ ಮಾಡಬೇಕಾಗಿದೆ ಮತ್ತು ಅಗತ್ಯ ಕ್ರಮವಹಿಸಬೇಕು ಎಂದು ಒತ್ತಾಯಿಸಿದ್ದಲ್ಲದೇ,  ಇದು ಆಗದಿದ್ದಲ್ಲಿ ಎಲ್ಲಾ ಗ್ರಾಮಪಂಚಾಯತ್ ಪ್ರತಿನಿಧಿಗಳೊಂದಿಗೆ ಬೃಹತ್ ಪ್ರತಿಭಟನೆಗೆ ನಡೆಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!