spot_img
Wednesday, January 22, 2025
spot_img

ವಾರಾಹಿ ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ : ಸ್ಥಳಾಂತರಕ್ಕೆ ಸೂಚನೆ

ಜನಪ್ರತಿನಿಧಿ (ಉಡುಪಿ ) :  ವಾರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವ ಕಾರಣದಿಂದ ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಅಭಿಯಂತರರು ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವಾರಾಹಿ/ಹಾಲಾಡಿ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದ್ದಾರೆ.

ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಸೂಚಿಸಿದ್ದಾರೆ. ನಿರಂತರ ಮಳೆಯದಾಗಿ ಜಲಾಶಯದ ನೀರಿನ ಮಟ್ಟ ಏರಿಕಾಯಾಗಿದೆ ಮಾಣಿ ಜಲಾಶಯದ ಗರಿಷ್ಟ ಮಟ್ಟ 594.36 ಮೀಟರ್ ಆಗಿದೆ. ಆ.5ರಂದು ಬೆಳಗ್ಗೆ 8ಗಂಟೆಗೆ ಜಲಾಶಯದ ಮಟ್ಟ 588.15 (ಶೇ.65.17) ಮೀಟರ್‌ಗಳಾಗಿರುತ್ತದೆ. ಈ ದಿನದ ಮಾಣಿ ಜಲಾಶಯದ ಒಳಹರಿವು ಸುಮಾರು 3393 ಕ್ಯುಸೆಕ್ಸ್ ಆಗಿದೆ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಹೀಗೆ ಜಲಾಶಯಕ್ಕೆ ಒಳಹರಿವು ಮುಂದುವರಿದಲ್ಲಿ ಜಲಾಶಯವು ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ. ಮಾಣಿ ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚಾದ ನೀರನ್ನು ಹೊರಬಿಡಲಾಗುವುದು ಎಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!