Monday, September 9, 2024

ಅಶೋಕ್‌ ಅವರೇ… ನಮಗೆ ಪ್ರಶ್ನೆ ಕೇಳುವ ಮೊದಲು ಯತ್ನಾ‍ಳ್ ನಿಮ್ಮ ಪಕ್ಷದ ಅಧ್ಯಕ್ಷರ ಮೇಲೆ ಮಾಡುತ್ತಿರುವ ಆರೋಪಗಳಿಗೆ ಉತ್ತರಿಸಿ : ಸಿಎಂ ಕಿವಿಮಾತು

ಜನಪ್ರತಿನಿಧಿ (ಬೆಂಗಳೂರು) : ಅಶೋಕ್‌ ಅವರೇ ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ, ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ ಎಸ್.ಐ.ಟಿ ಯನ್ನು ರಚಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಿಮಗೆ ಇಲ್ಲವೇ ನಿಮ್ಮ ಬಿಜೆಪಿ ಪಕ್ಷಕ್ಕೆ ಏನಾದರೂ ಹೇಳುವುದಿದ್ದರೆ ಇಲ್ಲವೇ ಕೇಳುವುದಿದ್ದರೆ ಎಸ್.ಐ.ಟಿ ಮುಂದೆ ಹೋಗಿ ಕೇಳಿ, ಇಲ್ಲವೇ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿರುವ ಅವರು, ಇದನ್ನು ಬಿಟ್ಟು ಹಾದಿಬೀದಿಯಲ್ಲಿ ಮಾತನಾಡುವವರಂತೆ, ತಾವೇ ಕತೆ ಕಟ್ಟಿಕೊಂಡು ತಲೆಬುಡ ಇಲ್ಲದ ಅರ್ಥಹೀನ ಪ್ರಶ್ನೆಗಳನ್ನು ನನಗೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.

ನಮಗೆ ಪ್ರಶ್ನೆ ಕೇಳುವ ಮೊದಲು ನಿಮ್ಮದೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾ‍ಳ್ ಅವರು ನಿರಂತರವಾಗಿ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ವಿರುದ್ಧ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ಧೈರ್ಯ ತೋರಿಸಿ ಎಂದು ಹೇಳಿದ್ದಾರೆ.

ಭ್ರಷ್ಟಾಚಾರ, ವಿದ್ರೋಹ ಮತ್ತು ಸ್ವಜನಪಕ್ಷಪಾತವೂ ಸೇರಿದಂತೆ ಯತ್ನಾಳ್  ಅವರು ಮಾಡುತ್ತಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ. ಇಂತಹ ಆರೋಪಗಳನ್ನು ಮಾಡಿದ ನಂತರವೂ ಅವರ ವಿರುದ್ಧ ಭಾರತೀಯ ಜನತಾ ಪಾರ್ಟಿ ಹೈಕಮಾಂಡ್ ಯಾವುದೇ ಕ್ರಮಕೈಗೊಳ್ಳದಿರುವುದನ್ನು ನೋಡಿದರೆ  ಅವರ ಆರೋಪಗಳಲ್ಲಿ ಸತ್ಯಾಂಶ ಇರುವುದನ್ನು ಪಕ್ಷದ ಹೈಕಮಾಂಡ್ ಕೂಡಾ ಒಪ್ಪಿಕೊಂಡಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!