Monday, September 9, 2024

ಗೆಜೆಟೆಡ್ ಪ್ರೊಬೆಷನರ್ಸ್ ಪರೀಕ್ಷೆ ಮುಂದೂಡಿಕೆ : ಹೊಸ ದಿನಾಂಕ ಘೋಷಿಸಿದ KPSC

ಜನಪ್ರತಿನಿಧಿ (ಬೆಂಗಳೂರು) : ಆ.25ಕ್ಕೆ ನಿಗದಿಯಾಗಿದ್ದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕ ಮುಂದೂಡಿಕೆ ಮಾಡಿದ್ದು, ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ 384 ಹುದ್ದೆಗಳ ನೇಮಕಾತಿಗೆ ಪರೀಕ್ಷೆಯ ನೂತನ ವೇಳಾಪಟ್ಟಿಯನ್ನು ಕೆಪಿಎಸ್‌ಸಿ ಬಿಡುಗಡೆ ಮಾಡಿದೆ.

ಗೆಜೆಟೆಡ್ ಪ್ರೊಬೆಷನರ್ಸ್ ಗ್ರೂಪ್ ಎ, ಬಿ ವಿಭಾಗದ 384 ಹುದ್ದೆಗಳ ನೇಮಕಾತಿ ಪರೀಕ್ಷೆಗೆ ನಿಗದಿಯಾಗಿದ್ದ ದಿನದಂದ ಬ್ಯಾಂಕಿಂಗ್ ಪರೀಕ್ಷೆಯೂ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೆಎಎಸ್ ಅಭ್ಯರ್ಥಿಗಳು ಪರೀಕ್ಷೆ ದಿನಾಂಕ ಮುಂದೂಡುವಂತೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ್ದ ಸಿಎಂ ಸಿದ್ದರಾಮಯ್ಯ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಕೆಪಿಎಸ್‌ಸಿಗೆ ಸೂಚಿಸಿದ್ದರು. ಈಗ ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿ ಅಧಿಸೂಚನೆ ಬಿಡುಗಡೆ ಮಾಡಿದೆ.

ಆಗಸ್ಟ್​ 25ರ ಬದಲಾಗಿ ಆ.27 (ಮಂಗಳವಾರ) ರಂದು ನಡೆಸಲು ತೀರ್ಮಾನಿಸಲಾಗಿದೆ. ಆ.25ರಂದು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಈಗಾಗಲೇ ಒಟ್ಟು 564 ಪರೀಕ್ಷಾ ಉಪಕೇಂದ್ರಗಳಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾಗಿತ್ತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!