spot_img
Friday, March 13, 2026
spot_img

ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಜಿ.ವೆಂಕಟೇಶ ಬಿ.ಶೆಣೈ ಆಯ್ಕೆ

ಗಂಗೊಳ್ಳಿ : ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಕೋ-ಆಪರೇಟಿವ್ ಸೊಸೈಟಿಯ ೨೦೨೪-೨೬ನೇ ಸಾಲಿನ ಅಧ್ಯಕ್ಷರಾಗಿ ಜಿ.ವೆಂಕಟೇಶ ಬಿ.ಶೆಣೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಹಕಾರಿಯ ಸಭಾ ಭವನದಲ್ಲಿ ಸೋಮವಾರ ನಡೆದ ಅಧ್ಯಕ್ಷರ ಸ್ಥಾನಕ್ಕೆ ಒಂದು ನಾಮಪತ್ರ ಮಾತ್ರ ಸಲ್ಲಿಕೆ ಆದ ಕಾರಣ ಜಿ.ವೆಂಕಟೇಶ ಶೆಣೈ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ನಿರ್ವಾಚನಾಧಿಕಾರಿ ಜಯರಾಮ ಕೆ. ಘೋಷಿಸಿದರು. ಸಹಕಾರಿಯ ಅಧ್ಯಕ್ಷರಾಗಿದ್ದ ಎಚ್.ಗಣೇಶ ಕಾಮತ್ ಅವರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಸಹಕಾರಿಯ ಅಧ್ಯಕ್ಷ ಸ್ಥಾನ ತೆರವಾಗಿತ್ತು.

ಸಹಕಾರಿಯ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ, ನಿರ್ದೇಶಕರಾದ ಎಚ್.ಗಣೇಶ ಕಾಮತ್, ಎನ್.ಮಾಧವ ಕಿಣಿ, ಎಸ್.ವೆಂಕಟರಮಣ ಆಚಾರ್ಯ, ಬಿ.ರಾಘವೇಂದ್ರ ಪೈ, ಜಿ.ವೇದವ್ಯಾಸ ಆಚಾರ್ಯ, ಕೆ.ಪರಮೇಶ್ವರ ನಾಯಕ್, ನಾಗಪ್ರಸಾದ ಪೈ ಎಂ.ಜಿ., ಕೆ.ಗೋಪಾಲಕೃಷ್ಣ ನಾಯಕ್, ಮಹಾಬಲ ಪೂಜಾರಿ, ಕಿರಣ್ ಫಿಲಿಪ್ ಪಿಂಟೊ, ಮಾಲಾ ಕೆ.ನಾಯಕ್, ಗೀತಾ ನಾಯಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ವೆಂಕಟೇಶ ಶೆಣೈ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!