spot_img
Friday, March 13, 2026
spot_img

ಬೈಲೂರು ಶಾಲೆಯಲ್ಲಿ ‘ಕಲಿ ಕಲಿಸು ಕಲಾ ಅಂತರ್ಗತ ಕಲಿಕೆ’ ಯಕ್ಷಗಾನ ತರಬೇತಿ ಉದ್ಘಾಟನೆ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇಲ್ಲಿ ರಾಜ್ಯ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಬೆಂಗಳೂರು, ಇಂಡಿಯಾ ಪೌಂಡೇಷನ್ ಫಾರ್ ಆರ್ಟ್ಸ್ ಬೆಂಗಳೂರು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇವರ ಸಹಯೋಗದಲ್ಲಿ ಆ.೩ರಂದು ಕಲಿ ಕಲಿಸು ಕಲಾ ಅಂತರ್ಗತ ಕಲಿಕೆಯ “ ಕರಾವಳಿಯ ವೀರ ವನಿತೆಯರು ಸಾಮಾಜಿಕ ಶೋಷಣೆ ಮತ್ತು ವಿದೇಶಿಯರ ವಿರುದ್ಧ ಹೋರಾಡಿ ನಾಡು ಕಟ್ಟಿದ ಕಥನಕ್ಕೆ ಯಕ್ಷರಂಗ ರೂಪ ನೀಡಿ ಶಾಲಾ ವಿದ್ಯಾರ್ಥಿನಿಯರಿಂದ ಅಭಿನಯಿಸುವುದು” ಎಂಬ ಯೋಜನೆಯ ಅಂಗವಾಗಿ ಮಕ್ಕಳಿಗೆ ಯಕ್ಷಗಾನ ತರಬೇತಿಯನ್ನು ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷೆ ಶೋಭಾ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಯಕ್ಷಗಾನ ತರಬೇತುದಾರರಾದ ಕಿಶೋರ ಕುಮಾರ ಆರೂರು ಸಂಚಾಲಕರು ಯಕ್ಷಸಿರಿ ಶಂಕರನಾರಾಯಣ, ಶಾಲಾ ಮುಖ್ಯ ಶಿಕ್ಷಕಿ ಗಿರಿಜಾ ಡಿ. ಉಪಸ್ಥಿತರಿದ್ದರು.

ಕಲಿ ಕಲಿಸು ಕಲಾ ಅಂತರ್ಗತ ಕಲಿಕೆಯ ಯೋಜನೆಯ ನಿರ್ವಾಹಕರಾದ ಶಾಲಾ ಸಹ ಶಿಕ್ಷಕ ಆನಂದ ಕುಲಾಲ ಪ್ರಸ್ತಾವನೆಗೈದರು. ಸಹ ಶಿಕ್ಷಕಿ ಸಂಧ್ಯಾ ಕೆ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಪ್ರಮೀಳಾ ವಂದಿಸಿದರು. ಗೌರವ ಶಿಕ್ಷಕಿ ವಿಶಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

ನಂತರದಲ್ಲಿ ಯಕ್ಷಗಾನ ತರಬೇತುದಾರರಾದ ಕಿಶೋರ ಕುಮಾರ ಮಕ್ಕಳಿಗೆ ವಿವಿಧ ತಾಳಗಳನ್ನು ಪರಿಚಯಿಸುತ್ತ ಯಕ್ಷಗಾನ ತರಬೇತಿಯನ್ನು ಆರಂಭಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!