Monday, September 9, 2024

ವಾಲ್ಮೀಕಿ ಹಗರಣ : ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿ ಆದೇಶಿಸಿದ ಹೈಕೋರ್ಟ್‌ !

ಜನಪ್ರತಿನಿಧಿ(ಬೆಂಗಳೂರು) : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ದಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ರಾಜ್ಯ ಸರ್ಕಾರ ನೇಮಿಸಿರುವ ಎಸ್‌ಐಟಿ (ವಿಶೇಷ ತನಿಖಾ ದಳ) ತನಿಖೆ ನಡೆಸುವ ವ್ಯಾಪ್ತಿ ಹೊಂದಿಲ್ಲ ಎಂದು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾವನ್ನು ಹೈಕೋರ್ಟ್‌ನಲ್ಲಿ ಪ್ರತಿನಿಧಿಸುತ್ತಿರುವ ಅಟಾರ್ನಿ ಜನರಲ್‌ ಆರ್.‌ ವೆಂಕಟರಮಣಿ ಪ್ರತಿಒಪಾದಿಸಿದ್ದಾರೆ.

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು ಎಂದು ಕೋರಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ಮಾಡಿದೆ.

ವಿಚಾರಣೆ ಸಂದರ್ಭದಲ್ಲಿ ಖುದ್ದಾಗಿ ಹಾಜರಾಗಿದ್ದ ಆರ್.‌ ವೆಂಕಟರಮಣಿ, ಬ್ಯಾಂಕ್‌ ನಲ್ಲಿ ಐವತ್ತು ಕೋಟಿಗಿಂತಲೂ ಹೆಚ್ಚು ಮೊತ್ತದ ಅವ್ಯವಹಾರ ನಡೆದಿದೆ. ಇಂತಹ ಪ್ರಕರಣವನ್ನು ಸಿಬಿಐ ವಿಚಾರಣೆಗೆ ಒಳಪಡಿಸಲು ಅವಕಾಶವಿದೆ. ಹಗರಣದಲ್ಲಿ ಭಾಗಿಯಾಗಿರುವ ಬ್ಯಾಂಕ್‌ ಅಧಿಕಾರಿಗಳಲ್ಲದೇ ಇತರರ ವಿರುದ್ಧವೂ ತನಿಖೆ ನಡೆಸಬಹುದಾಗಿದೆ. ರಾಜ್ಯ ಸರ್ಕಾರ ತನಿಖೆಗಾಗಿ ಎಸ್‌ಐಡಿ ರಚಿಸದೆಯಾದರೂ, ಎಸ್ಐಡಿ ತನಿಖಾ ವರ್ಯಾಪ್ತಿ ಹೊಂದಿಲ್ಲ. ಅಷ್ಟಕ್ಕೂ ದಾಖಲೆ ಪರಿಶೀಲಿಸಿದ ಬಳಿಕ ಸಿಬಿಐಗೆ ಒಪ್ಪಿಗೆಯಾದರೆ ಎಸ್‌ಐಟಿ ತನಿಖೆಗೆ ಸಲಹೆ ನೀಡಬಹುದು ಎಂದು ಅವರು ಹೇಳಿದ್ದಾರೆ.

ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಆರೋಪಿತ ದೂರುದಾರರು (ಯೂನಿಯನ್‌ ಬ್ಯಾಂಕ್ ಆಫ್ ಇಂಡಿಯಾ) ತಮಗೆ ಹೊಂದುವ ತನಿಖಾ ಸಂಸ್ಥೆಯನ್ನು ಆಯ್ದುಕೊಳ್ಳಲು ಆಗದು. ಪೊಲೀಸ್, ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ’ ಎಂದು ಹೇಳಿದರು.

ಮುಂದುವರಿದು, ‘ಬ್ಯಾಂಕ್ ಮತ್ತು ಆರ್‌ಬಿಐ ಏನು ಮಾಡಬೇಕೆಂದಿದೆಯೋ ಅದನ್ನು ಮಾಡಲಿ. ರಾಜ್ಯ ಸರ್ಕಾರ ಪ್ರಕರಣದ ತನಿಖೆ ನಡೆಸದೇ ಮೌನವಹಿಸುವಂತೆ ಹೇಳಲಾಗದು. ಇದು ಸಾಂವಿಧಾನಿಕ ಪ್ರಶ್ನೆಯಾಗಿದ್ದು, ಇದಕ್ಕೆ ನ್ಯಾಯಾಲಯ ಉತ್ತರಿಸಬೇಕಿದೆ. ಸದ್ಯಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಪರ ಹಾಜರಾಗಿದ್ದ ಹಿರಿಯ ವಕೀಲ ರವಿವರ್ಮ ಕುಮಾರ್ ಅವರೂ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಇದನ್ನು ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿ ಆದೇಶಿಸಿದೆ.

ಇದೇ ವೇಳೆ ಶಶಿಕಿರಣ್ ಶೆಟ್ಟಿ, ‘ಯೂನಿಯನ್ ಬ್ಯಾಂಕ್‌ ಆಫ್ ಇಂಡಿಯಾದ ಅಧಿಕಾರಿಗಳಾದ ನಿತೇಶ್ ರಂಜನ್‌, ಎ.ಮಣಿಮೇಖಲೈ, ಎಸ್‌.ರಾಮ ಸುಬ್ರಮಣಿಯನ್, ಸಂಜಯ್ ರುದ್ರ ಮತ್ತು ಪಂಕಜ್ ದ್ವಿವೇದಿ ವಿರುದ್ಧದ ಪ್ರಾಥಮಿಕ ತನಿಖೆಯಲ್ಲಿ ಯಾವುದೇ ದಾಖಲೆಗಳು ದೊರೆತಿಲ್ಲ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!