Thursday, November 21, 2024

ಬಿ. ಬಿ. ಹೆಗ್ಡೆ ಕಾಲೇಜು: ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕವು ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದೊಂದಿಗೆ ಮೂರು ದಿನದ ಸಾಫ್ಟ್ ಸ್ಕಿಲ್ ತರಬೇತಿಯನ್ನು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೋಟಿವೇಶನ್ ಸ್ಪೀಕರ್ ಡಾ| ಶರಣ್ ಕುಮಾರ್ ಶೆಟ್ಟಿಯವರು ಉದ್ಯೋಗ ಪಡೆಯುವಲ್ಲಿ ಅಂಕಗಳಷ್ಟೆ ಅಗತ್ಯವಿರುವ ಕೌಶಲ್ಯಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕೌಶಲ್ಯಗಳು ವಿದ್ಯಾರ್ಥಿಗಳನ್ನು ಸ್ಪರ್ಧಾ ಚೇತನರನ್ನಾಗಿಸಿ ಅವಕಾಶಗಳನ್ನು ತೆರೆದುಕೊಳ್ಳುವಂತೆ ಮಾಡುತ್ತದೆ ಎಂದರು. ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ನ ಜೌಶ್ ಡ್ಯಾನಿಯಲ್ ಮಾತನಾಡಿ ಮೂರು ದಿನದ ಕಾರ್ಯಾಗಾರದ ಬಗ್ಗೆ ವಿವರಿಸಿದರು. ವೃತ್ತಿ ಮಾರ್ಗದರ್ಶನ ಘಟಕದ ಸಂಯೋಜಕರಾದ ಮಹೇಶ್ ಕುಮಾರ್ ಉಪಸ್ಥಿತರಿದ್ದರು.

ಈ ಸಂದರ್ಭ ಉಪಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಾಣಿಜ್ಯ ಪ್ರಾಧ್ಯಾಪಕರಾದ ಅಕ್ಷಯ್ ಕುಮಾರ್ ಅತಿಥಿಯನ್ನು ಪರಿಚಯಿಸಿದರು. ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ಸುರೇಶ್ ಕಾಮತ್ ಕೆ. ವಂದಿಸಿದರು. ಇಂಗ್ಲೀಷ್ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ನಿರೂಪಿಸಿದರು. ವಿದ್ಯಾರ್ಥಿನಿ ಅನುಷಾ ಪ್ರಾರ್ಥಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!