Monday, September 9, 2024

ಕಳ್ಳತನವನ್ನು ತಡೆಯಬೇಕು, ವದಂತಿ ವಿರುದ್ಧ ಜನಜಾಗೃತಿ ಅಗತ್ಯ-ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ಹಾಗೂ ಈ ಬಗ್ಗೆ ವದಂತಿಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಜನರ ವಿಶ್ವಾಸ ಪಡೆದು ವಿವಿಧೆಡೆ ಜನಜಾಗೃತಿ ಮೂಡಿಸುವ ಕಾರ್ಯವನ್ನು ತ್ವರಿತವಾಗಿ ವ್ಯಾಪಕ ರೀತಿಯಲ್ಲಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ.

ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ವದಂತಿಯು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹಾಗೆಯೇ ವದಂತಿಯಿಂದಲೇ ಅಮಾಯಕರ ಮೇಲೂ ಅನುಮಾನ ಮೂಡುವ ಅವಕಾಶ ಹೆಚ್ಚಿರುತ್ತದೆ. ಇಂತಹ ಪ್ರಕರಣ ಘಟಿಸಿದಾಗ ಇದಕ್ಕೂ ಪೊಲೀಸ್ ಇಲಾಖೆಯೇ ನೇರ ಹೊಣೆಯಾಗುತ್ತದೆ. ಆದ್ದರಿಂದ ಪೊಲೀಸ್ ಇಲಾಖೆಯು ಕಳ್ಳತನದ ವದಂತಿ ಬಗ್ಗೆ ಗ್ರಾಮೀಣ ಭಾಗದಲ್ಲಿ ಜನಜಾಗೃತಿ ಮೂಡಿಸುವ ತುರ್ತು ಅಗತ್ಯವಿದೆ. ಹಾಗೆಯೇ ಕಳ್ಳತನದ ಬಗ್ಗೆ ಯಾವೆಲ್ಲ ರೀತಿಯ ಎಚ್ಚರಿಕೆ ವಹಿಸಬೇಕು ಎಂಬುದರ ಬಗ್ಗೆಯೂ ಜನಸಾಮಾನ್ಯರಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಜತೆ ಸೇರಿ ಅರಿವು ಮೂಡಿಸುವ ಕಾರ್ಯವು ಆಗಬೇಕು. ವದಂತಿಗಳು ಹಬ್ಬದಂತೆ ತುರ್ತಾಗಿ ಎಚ್ಚರ ವಹಿಸಬೇಕು ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ವಾರ ಸಭೆ:
ಇದೇ ವಿಚಾರವಾಗಿ ಮುಂದಿನ ವಾರದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳ ಜೊತೆಗೂ ಸಭೆ ನಡೆಸಲಾಗುವುದು. ಅಗತ್ಯ ಬಿದ್ದರೆ ಸಾರ್ವಜನಿಕರೊಂದಿಗೂ ಸಭೆ ನಡೆಸಲಿದ್ದೇವೆ ಎಂದು ಶಾಸಕರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!