spot_img
Wednesday, April 1, 2026
spot_img

ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಜನಪ್ರತಿನಿಧಿ (ನವದೆಹಲಿ) : ವಿಶ್ವಮಟ್ಟದಲ್ಲಿ ಚರ್ಚೆಯಾಗಿದ್ದ ಕಾಲೇಜು ವಿದ್ಯಾರ್ಥಿನೀಯರು ಹಿಜಾಬ್‌ ಧರಿಸುವ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಹೌದು, ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ನಿಷೇಧಿಸುವ ಮುಂಬೈ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಇಂದು(ಶುಕ್ರವಾರ) ತಡೆಯಾಜ್ಞೆ ನೀಡಿದೆ.

ಕಾಲೇಜುಗಳಲ್ಲಿ ಹಿಜಾಬ್, ಬುರ್ಖಾ ನಿಷೇಧಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಮುಂಬೈ ಎಜುಕೇಶನಲ್ ಸೊಸೈಟಿಯಿಂದ ಪ್ರತಿಕ್ರಿಯೆ ಕೇಳಿದೆ. ಕಾಲೇಜು ಕ್ಯಾಂಪಸ್‌ನಲ್ಲಿ ‘ಹಿಜಾಬ್, ಬುರ್ಖಾ, ಕ್ಯಾಪ್ ಮತ್ತು ನಖಾಬ್’ ನಿಷೇಧಿಸುವ ಮುಂಬೈ ಕಾಲೇಜಿನ ಸುತ್ತೋಲೆಗೆ ಸಂಬಂಧಿಸಿದಂತೆ ನ್ಯಾಯಾಲಯ ಭಾಗಶಃ ತಡೆ ನೀಡಿ ಆದೇಶಿಸಿದೆ.

‘ಬುರ್ಖಾ, ಹಿಜಾಬ್’ ಬಗ್ಗೆ ತನ್ನ ಮಧ್ಯಂತರ ಆದೇಶವನ್ನು ದುರ್ಬಳಕೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ದುರ್ಬಳಕೆಯ ಸಂದರ್ಭದಲ್ಲಿ ನ್ಯಾಯಾಲಯ ಸಂಪರ್ಕಿಸಲು ಮುಂಬೈ ಕಾಲೇಜಿಗೆ ಮುಕ್ತ ಸ್ವಾತಂತ್ರ್ಯ ನೀಡಿದೆ. ತರಗತಿಯೊಳಗೆ ವಿದ್ಯಾರ್ಥಿನಿಯರು ಯಾವುದೇ ಬುರ್ಖಾ ಧರಿಸಲು ಹಾಗೂ ಕ್ಯಾಂಪಸ್‌ನಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆ ಅನುಮತಿ ಇಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!