Monday, September 9, 2024

ಸಕಲೇಶಪುರದ ಬಾಳ್ಳುಪೇಟೆಯಲ್ಲಿ ಗುಡ್ಡ ಕುಸಿತ | ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ.

ಜನಪ್ರತಿನಿಧಿ (ಮಂಗಳೂರು) : ಸಕಲೇಶಪುರದ ಬಾಳ್ಳುಪೇಟೆ ಬಳಿ ನಿನ್ನೆ(ಶುಕ್ರವಾರ) ತಡರಾತ್ರಿ ಗುಡ್ಡ ಕುಸಿತ ಸಂಭವಿಸಿರುವ ಕಾರಣದಿಂದಾಗಿ ಮಂಗಳೂರು- ಬೆಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಸುಮಾರು ಆರು ರೈಲ್ವೇ ನಿಲ್ದಾಣಗಳಲ್ಲಿ ರೈಲುಗಳನ್ನು ಈ ಕಾರಣದಿಂದಾಗಿ ತಡೆಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಈ ಕಾರಣದಿಂದ ರೈಲುಗಳಲ್ಲಿದ್ದ ಪ್ರಯಾಣಿಕರು ಪರದಾಡುವಂತಾಗಿದೆ. ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಈ ಭೂ ಕುಸಿತದ ಕಾರಣ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ. ಹಳಿಯ ಮೇಲೆ ಕುಸಿದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭವಾಗಿದೆ. ಆದರೆ ಈ ಕಾರ್ಯಾಚರಣೆ ಮುಗಿಯಲು ಹಲವಾರು ಗಂಟೆಗಳು ಬೇಕು ಎಂದು ಅಂದಾಜಿಸಲಾಗಿದೆ.

ಹಾಸನ-ಮಂಗಳೂರು ಮತ್ತು ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತವಾಗಿದೆ. ಸಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ 6 ಕಡೆ ವಿವಿಧ ರೈಲುಗಳನ್ನು ದಿಢೀರ್ ಎಂದು ನಿಲುಗಡೆ ಮಾಡಲಾಗಿದೆ.

ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ರೈಲಿನಲ್ಲಿಯೇ ಅವರು ಕುಳಿತಿದ್ದು, ಮಣ್ಣು ತೆರವು ಕಾರ್ಯಾಚರಣೆ ಬಳಿಕ ರೈಲುಗಳ ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!