spot_img
Wednesday, January 22, 2025
spot_img

ಮೊಟ್ಟೆ ಎಗರಿಸುತ್ತಿರುವ ವೀಡಿಯೋ ವೈರಲ್‌ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಅಮಾನತು : ಹೆಬ್ಬಾಳ್ಕರ್‌ ಆದೇಶ

ಜನಪ್ರತಿನಿಧಿ (ಕೊಪ್ಪಳ) : ಮಕ್ಕಳಿಗೆ ಪೌಷ್ಟಿಕ ಆಹಾರ ದೊರಕಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಅಂಗನವಾಡಿ ಮಕ್ಕಳಿಗೆ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದರೆ ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆಯನ್ನೂ ಕದ್ದು ಮಕ್ಕಳಿಗೆ ವಂಚಸುವ ಆರೋಪ ಕೊಪ್ಪಳ ಕೇಳಿಬಂದಿದೆ.

ಅಂಗನವಾಡಿ ಶಿಕ್ಷಕಿ, ಸಹಾಯಕಿಯರು ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ವಾಪಾಸ್‌ ತೆಗೆದುಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮಾತ್ರವಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಸಚಿವರು ಆದೇಶಿಸಿದ್ದಾರೆಂದು ತಿಳಿದು ಬಂದಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ, ಸಹಾಯಕಿ ಶೈನಜಾಬೇಗಂ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ವಾಪಾಸ್‌ ಕಿತ್ತುಕೊಳ್ಳುತ್ತಿದ್ದರು. ಮೊಟ್ಟೆ ತಿನ್ನುತ್ತಿದ್ದ ಮಗುವಿನಿಂದಲೂ ಮೊಟ್ಟೆ ಕಸಿದುಕೊಳ್ಳುತ್ತಿರುವುದು ಕೂಡ ವೀಡಿಯೋದಲ್ಲಿ ಕಾಣಬಹುದಾಗಿದೆ. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ, ಮಕ್ಕಳು ಬಾಯಿಗಿಡುವ ಮುನ್ನವೇ ಮೊಟ್ಟೆ ಕಸಿದುಕೊಂಡಿದ್ದಾರೆ. ಈ ಅಮಾನವೀಯ ಘಟನೆ ವೀಡಿಯೋದಲ್ಲಿ ಸೆರೆಯಾಗಿದೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕಾರ್ಯಕರ್ತೆ, ಸಹಾಯಕಿಯನ್ನು ಅಮಾನತು ಮಾಡಲಾಗಿದೆ.

ನಿನ್ನೆ (ಶುಕ್ರವಾರ) ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ತಂಡವು ಸಹ ಇಲ್ಲಿನ ಅಂಗನಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಸೇರಿ ಮಕ್ಕಳ ಮೊಟ್ಟೆಗಳನ್ನು ಎಗರಿಸುತ್ತಿರುವ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದರು. 50 ಅಂಗನವಾಡಿಗಳ ಪರಿಶೀಲಿಸಿದ ನಂತರ ಇಲ್ಲಿಯ ಅವ್ಯವಸ್ಥೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ಇದರ ಬೆನ್ನಲ್ಲೇ ಮೊಟ್ಟೆ ಕದಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಕ್ಕಳು ತಿನ್ನಲು ಮುಂದಾದ ಮೊಟ್ಟೆ ಕಸಿದುಕೊಂಡಿದ್ದಾರೆ. ವಿಡಿಯೊ ನೋಡಿದರೆ ಕರುಳು ಚುರ್ ಎನ್ನುತ್ತದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ಡಿಸ್ ಮಿಸ್ ಮಾಡಲು ಸೂಚಿಸಿದ್ದೇನೆ. ಜತೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ .

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!