spot_img
Friday, April 25, 2025
spot_img

ಮಕ್ಕಳ ಹಸಿವಿನ ಜೊತೆ ಚೆಲ್ಲಾಟವಾಡಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕರ ವಿರುದ್ಧ ಕ್ರಮ !

ಜನಪ್ರತಿನಿಧಿ (ಬೆಂಗಳೂರು) : ಅಂಗನವಾಡಿ ಕೇಂದ್ರಕ್ಕೆ ಪೂರೈಕೆಯಾಗಿರುವ ಮೊಟ್ಟೆಗಳನ್ನು ಮಕ್ಕಳಿಗೆ ವಿತರಿಸದೆ ಅವರು ಸೇವಿಸುವ ಸಮಯದಲ್ಲಿ ವಾಪಸ್ಸು ಪಡೆದು ಮಕ್ಕಳ ಹಸಿವಿನ ಜೊತೆ ಚೆಲ್ಲಾಟವಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು  ತ್ವರಿತವಾಗಿ ಸ್ಪಂದಿಸಿದ್ದು, ಪರಿಶೀಲನೆ ನಡೆಸಿದಾಗ ಕೊಪ್ಪಳ ಜಿಲ್ಲೆಯ ಕನಕಗಿರಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಗುಂಡೂರು – 2ನೇ ಅಂಗನವಾಡಿಯಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿರುತ್ತದೆ. ಕೂಡಲೇ ಕೊಪ್ಪಳ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ಸಿಎಂ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ ಜೆ ಮತ್ತು ಸಹಾಯಕಿ ಶೈನಜಾ ಬೇಗಂ ಇವರನ್ನು ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದ್ದ ವಿಡಿಯೋ ಗಮನಿಸಿದ ತಕ್ಷಣ ಸ್ಪಂದಿಸಿ ಕೆಲವೇ ಗಂಟೆಗಳಲ್ಲಿ ಕ್ರಮ ಕೈಗೊಂಡಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಮಕ್ಕಳ ಹಿತರಕ್ಷಣೆಗೆ ನಾವು ಸದಾ ಬದ್ಧರಾಗಿದ್ದೇವೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!