Wednesday, September 11, 2024

ವಿಪತ್ತು ಪೀಡಿತ ವಯನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ !

ಜನಪ್ರತಿನಿಧಿ (ವಯನಾಡು) : ಭಾರಿ ಗುಡ್ಡ ಕುಸಿತ ಪರಿಣಾಮದಿಂದ ನೂರಾರು ಮಂದಿ ಮೃತಪಟ್ಟು ಅಪಾರ ಸಾವು-ನೋವು ಕಂಡಿರುವ ವಿಪತ್ತು ಪೀಡಿತ ಉತ್ತರ ಕೇರಳದ ವಯನಾಡ್ ನಲ್ಲಿ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು(ಶನಿವಾರ) ಕೈಗೊಂಡಿದ್ದಾರೆ.

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಗುಡ್ಡ ಕುಸಿತದ ಪರಿಣಾಮದಿಂದ ಹಾನಿಗೊಳಪಟ್ಟಿರುವ ಚೂರಲ್‌ಮಲಾ, ಮುಂಡಕ್ಕೈ ಹಾಗೂ ಪುಂಚಿರಿಮಟ್ಟಂ ಕುಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದ ಮೋದಿ, ಬೆಳಗ್ಗೆ 11.15 ರ ಸುಮಾರಿಗೆ ಕಣ್ಣೂರು ವಿಮಾನ ನಿಲ್ದಾಣದಿಂದ ವಯನಾಡ್‌ಗೆ ತೆರಳಿದರು.

ಪ್ರಧಾನಮಂತ್ರಿಯವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಪ್ರವಾಸೋದ್ಯಮ ಹಾಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಉಪಸ್ಥಿತರಿದ್ದರು.

ವೈಮಾನಿಕ ಸಮೀಕ್ಷೆಯ ಬಳಿಕ ಅವರು ಇಲ್ಲಿನ ಕಲ್ಪೆಟ್ಟಾದಲ್ಲಿರುವ ಎಸ್‌ಕೆಎಂಜೆ ಹೈಯರ್ ಸೆಕೆಂಡರಿ ಶಾಲೆಗೆ ಬಂದಿಳಿದು ಅಲ್ಲಿಂದ ರಸ್ತೆ ಮಾರ್ಗವಾಗಿ ಕೆಲವು ವಿಪತ್ತು ಪೀಡಿತ ಪ್ರದೇಶಗಳಿಗೆ ಪರಿಶೀಲಿಸಿದ್ದಾರೆ. ವಿಪತ್ತು ಪೀಡಿತ ಪ್ರದೇಶದಲ್ಲಿ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ ಕೇರಳ ಸರ್ಕಾರವು ಕೇಂದ್ರದಿಂದ 2,000 ಕೋಟಿ ರೂಪಾಯಿಗಳ ನೆರವನ್ನು ಕೋರಿದೆ.

ಜುಲೈ 30 ರಂದು ಈ ಪ್ರದೇಶದಲ್ಲಿ ಗುಡ್ಡ ಕುಸಿತಗಳು ಸಂಭವಿಸಿ ಕನಿಷ್ಠ 500ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!