Wednesday, September 11, 2024

ಈ ಪಾದಯಾತ್ರೆ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ನಿಲ್ಲದು : ಸಿಎಂ ವಿರುದ್ಧ ಬಿಎಸ್‌ವೈ ಕಿಡಿ

ಜನಪ್ರತಿನಿಧಿ (ಮೈಸೂರು) : ನನ್ನ ಬದುಕಿನ ಕೊನೆ ಕ್ಷಣದೊರೆಗೂ ರಾಜಕೀಯದಲ್ಲಿ ಸಕ್ರೀಯವಾಗಿದ್ದು ನಿಮ್ಮನ್ನು ಮನೆಗೆ ಕಳುಹಿಸುವ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿದರು.

ಅವರು ಮೈಸೂರಿನಲ್ಲಿ ಬಿಜೆಪಿ ಜೆಡಿಎಸ್‌ ಜಂಟಿಯಾಗಿ ಮುಡಾ ಹಗರಣದ ವಿರುದ್ಧ ನಡೆಸಿದ ಪಾದಯಾತ್ರೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಇಡೀ ರಾಜ್ಯದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ರಾಜ್ಯ ಕಾಂಗ್ರೆಸ್‌ ಸರ್ಕಾರ ದಿವಾಳಿಯಾಗಿದೆ. ಡಿಸಿಎಂ ಶಿವಕುಮಾರ್‌ ತಾನು ಕಲ್ಲುಬಂಡೆ ಎಂದು ಹೇಳಿಕೊಳ್ಳುತ್ತಾರೆ. ವಿಜಯೇಂದ್ರ ಹಾಗೂ ಅಶೋಕ್‌ ಅವರನ್ನು ಏಕವಚನದಲ್ಲಿ ಮಾತನಾಡುತ್ತಾರೆ. ನಿಮ್ಮ ಭವಿಷ್ಯದ ಬಗ್ಗೆ ಮೊದಲು ಗಮನಕೊಡಿ. ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದೆ.

ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಆಕ್ರೋಶ ಹೊರ ಹಾಕಿದ ಅವರು, ಹಿಂದಿನ ಯಾವ ಮುಖ್ಯಮಂತ್ರಿಯೂ ಕೂಡ ತನ್ನ ಕುಟುಂಬಕ್ಕೆ ನಿವೇಶನ ಕೊಟ್ಟಿಲ್ಲ. ಇದು ಯಾರ ಅಪ್ಪನ ಮನೆ ದುಡ್ಡು ? ಇಷ್ಟಾದರೂ ಪ್ರಾಮಾಣಿಕ ಎನ್ನುತ್ತೀರಿ. ಇಂತಹ ಸಿಎಂ, ಡಿಸಿಎಂ ರಾಜ್ಯದಲ್ಲಿ ಇರುವಲ್ಲಿಯವರಗೆ ಅಭಿವೃದ್ಧಿ ಸಾಧ್ಯವಿಲ್ಲ. ರಾಜ್ಯದ ಜನ ಬೇಗ ನಿಮ್ಮನ್ನು ಮನೆಗೆ ಕಳುಹಿಸುತ್ತಾರೆ. ತಾಕತ್ತಿದ್ದರೇ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ. ಈಗಲೂ ಚುನಾವಣೆ ನಡೆಸಿದರೇ ನೂರರಿಂದ ನೂರ ಮೂವತ್ತು, ನೂರ ನಲವತ್ತು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದರು.

ಈ ಪಾದಯಾತ್ರೆ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ನಿಲ್ಲದು. ೮೨ ವರ್ಷ ಆಗಿದ್ದರೂ ರಾಜ್ಯದ ಉದ್ದಗಲ ಓಡಾಡುತ್ತೇನೆ ಎಂದು ಅವರು ಹೇಳಿದರು. ಮೋದಿ ಹಾಗೂ ದೇವೇಗೌಡರ ಬಗ್ಗೆಯೂ ಹಗುರವಾಗಿ ಮಾತನಾಡುತ್ತೀರಿ. ಇದು ನಿಮಗೆ ಶೋಭೆ ತರುವುದಿಲ್ಲ. ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ-ಜೆಡಿಎಸ್‌ ಸರ್ಕಾರ ತರಲು ಜನ ಕಾರಣಕರ್ತರಾಗಬೇಕಿದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!