spot_img
Wednesday, April 1, 2026
spot_img

ತುಂಗಾಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್‌ ನೀರುಪಾಲು | 12 ಲಕ್ಷ ಹೆಕ್ಟೇರ್‌ ಕೃಷಿ ಭೂಮಿ ಮುಳುಗಡೆಯಾಗುವ ಸಾಧ್ಯತೆ ! ರೈತರ ಆತಂಕ

ಜನಪ್ರತಿನಿಧಿ : ತುಂಗಭದ್ರಾ ಅಣೆಕಟ್ಟಿನಿಂದ ಅಣೆಕಟ್ಟಿನ ಕ್ರೆಸ್ಟ್ ಗೇಟ್‌ ಒಡೆದ ನೀರುಪಾಲಾಗಿರುವ ಪರಿಣಾಮ, ನಿನ್ನೆ(ಭಾನುವಾರ) ಮಧ್ಯಾಹ್ನದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರ ಹರಿಯುತ್ತಿದ್ದು, ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಯ ಸುಮಾರು 12 ಲಕ್ಷ ಹೆಕ್ಟೇರ್‌ ಕೃಷಿ ಭೂಮಿ ಮುಳುಗಡೆಯಾಗುವ ಸಾಧ್ಯತೆಯಿದೆ ಎಂದು ಈ ಭಾಗದ ರೈತರು ಕಳವಳ ವ್ಯಕ್ತಪಡಿಸಿದ್ದಾರೆ.

ಅಣೆಕಟ್ಟಿನಿಂದ 1.5 ಲಕ್ಷ ಕ್ಯೂಸ್‌ಗಿಂತ ಹೆಚ್ಚಿನ ನೀರನ್ನು ಹೊರಬಿಟ್ಟಾಗ, ಪ್ರವಾಹದಿಂದಾಗಿ ಅನೇಕ ಕೃಷಿ ಕ್ಷೇತ್ರಗಳು ಜಲಾವೃತವಾಗುತ್ತವೆ ಹಾಗೂ ಪ್ರಸ್ತುತ ಅಣೆಕಟ್ಟು 2 ಲಕ್ಷ ಕ್ಯೂಸೆಕ್ ದಾಟಿದೆ. ಇದರಿಂದಾಗಿ ರೈತರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲಾಗದೆ ಚಿಂತೆಗೀಡುಮಾಡುವಂತೆ ಮಾಡಿದೆ.

ಊಹೆಗೂ ಮೀರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿರುವ ಡ್ಯಾಮ್‌ನ ಕ್ರೆಸ್ಟ್ ಗೇಟ್‌ನ ಶೀಘ್ರ ದುರಸ್ತಿ ಮಾಡಲು ಹೊರಹರಿವನ್ನು 3 ಲಕ್ಷ ಕ್ಯೂಸೆಕ್‌ಗೆ ಹೆಚ್ಚಿಸಲು ಅಧಿಕಾರಿಗಳು ಯೋಜಿಸಿದ್ದಾರೆ. ನೀರು 3 ಲಕ್ಷ ಕ್ಯೂಸೆಕ್‌ಗೆ ತಲುಪಿದರೆ ಹೆಚ್ಚಿನ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಲಿದೆ ಎಂದು ಆತಂಕ ವ್ಯಕ್ತ ಪಡಿಸುತ್ತಾರೆ ಈ ಭಾಗದ ರೈತರು.

ಆಗಸ್ಟ್ 13 ರಂದು ಅಣೆಕಟ್ಟೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಲು ರೈತ ಸಂಘಟನೆಗಳು ಮುಂದಾಗಿವೆ ಎಂದು ಸದ್ಯ ತಿಳಿದು ಬಂದಿದೆ.

ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ರಾಯಚೂರು ಜಿಲ್ಲೆಗಳ ರೈತರು 12 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ಅಣೆಕಟ್ಟಿನ ನೀರನ್ನು ಅವಲಂಬಿಸಿದ್ದಾರೆ. ಮುಂಬರುವ ದಿನಗಳಲ್ಲಿ ಮಳೆಯಾಗುವ ನಿರೀಕ್ಷೆ ಇಲ್ಲ. ಇದು ಅಣೆಕಟ್ಟು ಅಧಿಕಾರಿಗಳ ನಿರ್ಲಕ್ಷ್ಯವಾಗಿದ್ದು, ಜವಾಬ್ದಾರಿಯುತ ಅಧಿಕಾರಿಗಳನ್ನು ಶಿಕ್ಷಿಸಬೇಕು ಎಂದು ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!