spot_img
Wednesday, April 1, 2026
spot_img

ವಂಡ್ಸೆ: ಮೆಸ್ಕಾಂ ಕಿರಿಯ ಇಂಜಿನಿಯರ್ ಪ್ರಕಾಶ ಮೊಗವೀರ ಅವರಿಗೆ ಬೀಳ್ಕೊಡುಗೆ

ವಂಡ್ಸೆ: ಮಂಗಳೂರು ವಿದ್ಯುತ್ ಶಕ್ತಿ ಸರಬರಾಜು ಕಂಪೆನಿ ನಿ., ವಂಡ್ಸೆ ಶಾಖೆ, ತಲ್ಲೂರು ಉಪ ವಿಭಾಗದ ಕಿರಿಯ ಇಂಜಿನಿಯರ್ ಪ್ರಕಾಶ ಮೊಗವೀರ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಆ.11 ರವಿವಾರ ವಂಡ್ಸೆಯ ಶ್ರೆಯಾ ಕನ್ವೆನ್‌ಷನ್ ಹಾಲ್‌ನಲ್ಲಿ ನಡೆಯಿತು.

ತಲ್ಲೂರು ಮೆಸ್ಕಾಂನ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ನಾಗರಾಜ ಮಂಜರು ಮಾರಣಕಟ್ಟೆ, ನ್ಯಾಯವಾದಿ ಪ್ರಸನ್ನಕುಮಾರ್ ಶೆಟ್ಟಿ ಕೆರಾಡಿ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ಜಿ.ಪಂ ಮಾಜಿ ಸದಸ್ಯ ಮಂಜಯ್ಯ ಶೆಟ್ಟಿ ಹರ್ಕೂರು, ಕುಂದಾಪುರ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಕಾರ್ಯದರ್ಶಿ ವಿಜಯ್ ಗೋವಿಂದ, ವಿದ್ಯುತ್ ಗುತ್ತಿಗೆದಾರರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ನಾರಾಯಣ ನಾಯಕ್ ನೇರಳಕಟ್ಟೆ, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವಿರಾಜ ಶೆಟ್ಟಿ, ವಿದ್ಯುತ್ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಜಯಂತ್ ಶೆಟ್ಟಿ, ಆಜ್ರಿ, ಗುತ್ತಿಗೆದಾರರಾದ ಚಂದ್ರ ಶೆಟ್ಟಿ ಚಿತ್ತೂರು, ಸಭಾಂಗಣದ ಮಾಲೀಕರಾದ ಶ್ರೀನಿವಾಸ ಪೂಜಾರಿ ಕಲ್ಮಾಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತಲ್ಲೂರು ಉಪ ವಿಭಾಗದ ಕಿರಿಯ ಇಂಜಿನಿಯರ್ ಪ್ರಕಾಶ ಮೊಗವೀರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವಿದ್ಯುತ್ ಗುತ್ತಿಗೆದಾರರಾದ ಸತೀಶ್ ಕೊಠಾರಿ ಕೆರಾಡಿ ಸ್ವಾಗತಿಸಿದರು. ಶಾಖಾಧಿಕಾರಿ ರಾಜೇಶ್ ವಂಡ್ಸೆ, ಶಶಿಧರ ಶೆಟ್ಟಿ ವಂಡ್ಸೆ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯುತ್ ಗುತ್ತಿಗೆದಾರರಾದ ಸತೀಶ್ ಕೊಠಾರಿ ವಂದಿಸಿದರು. ವಿದ್ಯುತ್ ಗುತ್ತಿಗೆದಾರರು ಮತ್ತು ಶಾಖಾ ನೌಕರರು ವಂಡ್ಸೆ ಕಾರ್ಯಕ್ರಮಕ್ಕೆ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!