Wednesday, September 11, 2024

ಹೆಚ್ಚಿನ ಸರಕಾರಿ ಬಸ್ ಬಗ್ಗೆ ಇಲಾಖೆಯೊಂದಿಗೆ ಪ್ರಯತ್ನಿಸುವೆ : ಹೆಂಗವಳ್ಳಿ ಗ್ರಾಮ ಸಭೆಯಲ್ಲಿ ಶಾಸಕ ಕೊಡ್ಗಿ ಭರವಸೆ

ಜನಪ್ರತಿನಿಧಿ (ಕುಂದಾಪುರ:ಆ,12) : ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಂಗವಳ್ಳಿ ಗ್ರಾಮ ಪಂಚಾಯಿತಿಯ 2024-25ನೇ ಪ್ರಥಮ ಸುತ್ತಿನ ಗ್ರಾಮ ಸಭೆಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಂಗವಳ್ಳಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ರಮ್ಯರವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಇದರ ಮಾರ್ಗದರ್ಶಿ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಮಧುಕರ್ ಅವರ ಕಾರ್ಯನಿರ್ವಹಿಸಿದರು.

ಸದ್ರಿ ಈ ಸಭೆಯಲ್ಲಿ ಇತರ ಎಲ್ಲಾ ಇಲಾಖೆ ಅಧಿಕಾರಿಗಳು ಹಾಜರಿದ್ದು ಇಲಾಖೆಯ ಮಾಹಿತಿಯನ್ನು ಗ್ರಾಮಸ್ಥರಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಯವರು ಉಪಸ್ಥಿತರಿದ್ದು, ಗ್ರಾಮಸ್ಥರು ಗೃಹಲಕ್ಷ್ಮಿ ಅನ್ನ ಭಾಗ್ಯ ಯೋಜನೆಯ ಹಣ ಬಾರದೆ ಇರುವ ಬಗ್ಗೆ ಇಲಾಖೆಯ ಅಧಿಕಾರಿಗಳ ಮುಂದೆ  ಅಸಮಾಧಾನವನ್ನು ಗ್ರಾಮ ಸಭೆಯಲ್ಲಿ ವ್ಯಕ್ತಪಡಿಸಿದರು. ಮತ್ತು  ಶಾಸಕರಲ್ಲಿ ಗ್ರಾಮಸ್ಥರು ಗ್ರಾಮಕ್ಕೆ ಒಂದೇ ಸರಕಾರಿ ಬಸ್ ಇರುವುದರ ಬಗ್ಗೆ ಮಾಹಿತಿ ನೀಡಿ. ಹೆಚ್ಚಿನ ಬಸ್ ಒದಗಿಸುವಂತೆ ವಿನಂತಿಸಿದರು.

ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತನಾಡಿ ಸೂಕ್ತ ಪರಿಹಾರ ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಶಾಸಕರು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಊರಿನ ಸಾಧಕರಿಗೆ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿ, ರಘುರಾಮ್ ಶೆಟ್ಟಿ,ವಸುಂದರ ಹೆಗ್ಡೆ ಮತ್ತು ಪ್ರಸ್ತುತ ಗ್ರಾಮದ ಉಪಾಧ್ಯಕ್ಷರು ಸದಸ್ಯರು, ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತ ಮತ್ತು ವಂದನಾರ್ಪಣೆಯನ್ನು ಪಿಡಿಒ ಮಧುಸೂದನ್ ಪ್ರಸಾದ್ ನಿರ್ವಹಿಸಿದರು. ಸ.ಹಿ.ಪ್ರಾ.ಶಾಲೆ ಹೆಂಗವಳ್ಳಿ  ಶಾಲಾ ಶಿಕ್ಷಕಿ ಜಯಲಕ್ಷ್ಮಿ ಕಾರ್ಯಕ್ರಮದ ನಿರೂಪಣೆ ಮಾಡಿದರು. ಗ್ರಾಮ ಪಂಚಾಯಿತಿನ ಉಪಾಧ್ಯಕ್ಷರಾದ ಯೋಗೇಶ್ ಮಡಿವಾಳ ಸರ್ವರಿಗೂ ಧನ್ಯವಾದ ಸಮರ್ಪಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!