Monday, September 9, 2024

ಜಿಲ್ಲಾಡಳಿತ ಹಾಗೂ ಕಾಂಗ್ರೆಸ್‌ ಸರ್ಕಾರದ ವಿರುದ್ಧ ದಿಢೀರ್‌ ಧರಣಿ ನಡೆಸುತ್ತಿರುವ ಗಂಟಿಹೊಳೆ

ಜನಪ್ರತಿನಿಧಿ (ಬೈಂದೂರು) : ಶಾಸಕರ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ತರುತ್ತಿದ್ದಾರೆ ಎಂದು ಆರೋಪಿಸಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ದಿಢೀರ್‌ ಎಂದು ಧರಣಿಗೆ ಕೂತಿದ್ದಾರೆ.

ಶಾಸಕ ಗುರುರಾಜ್‌ ಗಂಟಿಹೊಳೆ ಅವರು ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತ ಕಚೇರಿಯಲ್ಲಿ ಇಂದು ಅಧಿಕಾರಿಗಳ ಸಭೆ ನಿಗದಿಗೊಳಿಸಿದ್ದರು. ಆದರೆ ಈ ಸಭೆಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಕರೆ ಮಾಡಿ ಸೂಚಿಸಿದ್ದರು, ಹೀಗಾಗಿ ಅಧಿಕಾರಿಗಳು ಸಭೆಗೆ ಹಾಜರಾಗಿರಲಿಲ್ಲ. ಇದರಿಂದ ಕೆರಳಿದ ಶಾಸಕರು ಜಿಲ್ಲಾಡಳಿತದ ವಿರುದ್ಧವೇ ಬೈಂದೂರು ತಾಲೂಕು ಆಡಳಿದ ಸೌದಧ ಮುಂಭಾಗದಲ್ಲಿ ಕಾರ್ಯಕರ್ತರೊಂದಿಗೆ ಧರಣಿ ನಡೆಸುತ್ತಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕರು, ಜನ ಕರೆದಲ್ಲಿಗೆ ನಾನು ಹೋಗಬೇಕು, ನಾನು ಕರೆದಲ್ಲಿಗೆ ಜನರ ಅಹವಾಲು ಸ್ವೀಕರಿಸಲು ಅಧಿಕಾರಿಗಳು ಬರಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇರುವುದು ಜನಸೇವೆಗೆ.  ಸರ್ಕಾರ ನೀಡಿದ ಒಂದು ಕಚೇರಿಯಲ್ಲಿ ಕಾಲ ಮೇಲೆ ಕಾಲು ಹಾಕಿ ದರ್ಬಾರ್‌ ನಡೆಸುವ ವ್ಯಕ್ತಿ ನಾನಲ್ಲ. ತಾಲ್ಲೂಕಿನ ಜನತೆಯ ಉಪಯೋಗಕ್ಕಾಗಿ ಕ್ಷೇತ್ರದ ನಾಲ್ಕು ಭಾಗಗಳಲ್ಲಿ ಕಚೇರಿ ತೆರೆದಿದ್ದೇನೆ. ಈ ಕಚೇರಿಗಳಲ್ಲಿ ನಡೆಯುವ ಸಭೆಗಳಿಗೆ ಅಧಿಕಾರಿಗಳು ಹೋಗದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡುತ್ತಿರುವುದು ಏಕೆ? ಜಿಲ್ಲಾಧಿಕಾರಿಗಳಿಗೆ ರಾಜಕೀಯ ಒತ್ತಡವಿದ್ದರೆ ನೇರ ಹೇಳಿ ಬಿಡಲಿ. ಶಾಸಕನ ಹಕ್ಕು ಮೊಟಕುಗೊಳಿಸುತ್ತಿರುವ ಆಡಳಿತಯಂತ್ರದ ವಿರುದ್ಧ ಅಹೋರಾತ್ರಿ ಧರಣಿಯ ಸಮರ ಸಾರಿದ್ದೇನೆ. ಸ್ಪಷ್ಟನೆ ಲಭ್ಯವಾಗುವವರೆಗೆ ವಿರಮಿಸುವ ಮಾತೇ ಇಲ್ಲ” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!