spot_img
Friday, January 17, 2025
spot_img

ತುಂಗಾಭದ್ರಾ ಅಣೆಕಟ್ಟಿನಲ್ಲಿ ನೀರುಪಾಲಾದ ಗೇಟ್‌ | ಇಂದು ಸಿಎಂ ಭೇಟಿ, ಪರಿಶೀಲನೆ, ಅಧಿಕಾರಿಗಳೊಂದಿಗೆ ಸಮಾಲೋಚನೆ

ಜನಪ್ರತಿನಿಧಿ (ಕೊಪ್ಪಳ) : ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್ ಮುರಿದ ಹಿನ್ನಲೆಯಲ್ಲಿ ಅದರ ಪರಿಶೀಲನೆಗೆ ಸಿಎಂ ಸಿದ್ದರಾಮಯ್ಯ ಇಂದು(ಮಂಗಳವಾರ) ಭೇಟಿ ನೀಡಲಿದ್ದಾರೆ.

ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ 19ನೇ ಗೇಟ್ ಮುರಿದ ಸ್ಥಳಕ್ಕೆ  ಸಚಿವರೊಂದಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಭೇಟಿ ನೀಡಿ ಪರಿಶೀಲನೆ ನಡೆಸಿದ  ಬಳಿಕ ನೀರಾವರಿ ತಜ್ಞರು, ಅಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಈ ವರ್ಷ ಮುಂಗಾರು ಮಳೆ ಉತ್ತಮವಾಗಿದ್ದು, ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮೊನ್ನೆ ಆಗಸ್ಟ್‌ 6ರಂದು ಸಿಎಂ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಿಸಲು ಬರಬೇಕಿತ್ತು. ಕಾರಣಾಂತರದಿಂದ ಬಾಗಿನದ ದಿನಾಂಕವನ್ನು ಆಗಸ್ಟ್‌ 10ಕ್ಕೆ ಮುಂದೂಡಲಾಗಿತ್ತು. ನಂತರ ಇದೇ ದಿನಾಂಕವನ್ನು ಆಗಸ್ಟ್‌ 13ಕ್ಕೆ ಮುಂದೂಡಿಕೆ ಮಾಡಲಾಯಿತು. ಅಂದುಕೊಂಡಂತೆ ನಡೆದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಗಾಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಬೇಕಿತ್ತು.

ಆದರೆ ಆಗಸ್ಟ್‌ 10ರಂದು ರಾತ್ರಿ ಟಿಬಿ ಡ್ಯಾಂನ 19ನೇ ಕ್ರಸ್ಟ್‌ ಗೇಟ್‌ನ ಚೈನ್‌ ತುಂಡಾಗಿ ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಘಟನೆಯ ಹಿನ್ನಲೆಯಲ್ಲಿ ಬಾಗಿನ ಅರ್ಪಣೆ ಮಾಡಲು ಬರಬೇಕಿದ್ದ ಸಿಎಂ ಮುರಿದ ಗೇಟ್ ವೀಕ್ಷಿಸಿ ಹಿರಿಯ ಅಧಿಕಾರಿಗಳ ಜತೆ ಸಮಾಲೋಚನೆ ಮಾಡಲು ಆಗಮಿಸುವ ಪರಿಸ್ಥಿತಿ ಎದುರಾಗಿದೆ.

https://x.com/KiranTNIE1/status/1822496564163518685

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!