spot_img
Sunday, February 15, 2026
spot_img

ಬದುಕಿನ ಆಂತರಿಕ ಸಂಗತಿಯೇ ಸಂಸ್ಕೃತಿ-ಡಾ.ರೇಖಾ ಬನ್ನಾಡಿ

ಕುಂದಾಪುರ: ನಮ್ಮ ಭಾಷೆ, ನಂಬಿಕೆ, ಆಚಾರ-ವಿಚಾರ, ಜೀವನ ವಿಧಾನವೇ ಸಂಸ್ಕೃತಿ, ಬದುಕಿನ ಆಂತರಿಕ ಸಂಗತಿಯೇ ಸಂಸ್ಕೃತಿಯಾಗಿದೆ. ಅವುಗಳು ಅಸ್ಮಿತೆಯಾಗಿ ಉಳಿದಾಗ ಮಾತ್ರ ನಮ್ಮತನ ಉಳಿಯುತ್ತದೆ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕಿ ಡಾ| ರೇಖಾ ವಿ. ಬನ್ನಾಡಿ ಹೇಳಿದರು.

ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ ‘ಪ್ರೇರಣಾ’ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ “ನಮ್ಮ ಸಂಸ್ಕೃತಿ”ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭದಲ್ಲಿ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.

ಕನ್ನಡ ಪ್ರಾಧ್ಯಾಪಕಿ ಶ್ರೀಮತಿ ಪ್ರವೀಣಾ ಮಹಾಬಲ ಪೂಜಾರಿ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಇಂಗ್ಲೀಷ್ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!