Wednesday, September 11, 2024

ತುಂಗಾಭದ್ರಾ ಜಲಾಶಯ ಮಳೆಯಿಂದ ಮರಳಿ ತುಂಬುತ್ತದೆ : ಸಿಎಂ ವಿಶ್ವಾಸ

ಜನಪ್ರತಿನಿಧಿ (ಕೊಪ್ಪಳ) : ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದಲ್ಲಿ ಅಕ್ಟೋಬರ್‌ ವರೆಗೂ ಮತ್ತೆ ಮಳೆಯಾಗಲಿದೆ. ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುನಿರಾಬಾದ್ ನಲ್ಲಿ ಕೊಚ್ಚಿ ಹೋದ ಗೇಟ್ ಸ್ಥಳಕ್ಕೆ ಭೇಟಿ ಮಾಡಿ ಅವರು ಇಂದು(ಮಂಗಳವಾರ) ಪರಿಶೀಲಿಸಿದರು.

ತುಂಗಭದ್ರಾ ಜಲಾಶಯಕ್ಕೆ ಸಂಬಂಧಿಸಿದಮತೆ ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಕೇಳಿಬರುತ್ತಿರುವ ಬಗ್ಗೆ ಸ್ಪಂದಿಸಿ ಮಾತನಾಡಿದ ಸಿಎಂ, ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಇದು ರಾಜಕೀಯ ಮಾಡುವ ವಿಷಯವಲ್ಲ. ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ. ಆದರೆ ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದವರು ಹೇಳಿದರು.

ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ಅಡಿ ನೀರು ತುಂಬಿತ್ತು. ಆದರೆ ಮುರಿದು ಬಿದ್ದಿರುವ ಗೇಟ್ ದುರಸ್ತಿಗಾಗಿ 50 ರಿಂದ 60 ಟಿಎಂಸಿ ಅಡಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬ‌ರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನ: ನೀರು ತುಂಬುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯಂತೆ ಆ. 15ರ ಬಳಿಕ ಪುನ: ಮಳೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ಸಮಸ್ಯೆ ಸಂಭವಿಸುವಂತೆ ಕಾಣಿಸುತ್ತಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!