Monday, September 9, 2024

ಪ.ಬಂಗಾಳ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ : ರಾಜ್ಯ ಸರ್ಕಾರ, ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿಗೊಳಿಸಿದ NHRC

ಜನಪ್ರತಿನಿಧಿ (ನವದೆಹಲಿ) : ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಇಂದು(ಮಂಗಳವಾರ) ಪಶ್ಚಿಮ ಬಂಗಾಳ ಸರ್ಕಾರ ಹಾಗೂ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿರುವ ಅಮಾನುಷ ಘಟನೆಗೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಸವಿವರವಾದ ವರದಿಯನ್ನು ನೀಡುವಂತೆ ಸೂಚಿಸಿರುವುದಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಸ್ನಾತಕೋತ್ತರ ವೈದ್ಯೆ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾರೆ ಎಂಬ ಮಾಧ್ಯಮಗಳ ವರದಿಯನ್ನು ಆಧರಿಸಿ ಎನ್‌ಎಚ್‌ಆರ್‌ಸಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

“ರಾಷ್ಟ್ರೀಯ ಸುದ್ದಿ ಮಾಧ್ಯಮಗಳ ವರದಿಗಳ ಪ್ರಕಾರ, ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ”.

ಆದಾಗ್ಯೂ ಮಾಧ್ಯಮ ವರದಿಗಳ ವಿಷಯವು ಸತ್ಯವಾಗಿದ್ದರೆ, ಸಂತ್ರಸ್ತೆಯ ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಸಮಸ್ಯೆಯನ್ನು ಎತ್ತುತ್ತದೆ ಎಂದು ಆಯೋಗ ಹೇಳಿದೆ.

ಕಳೆದ ಶುಕ್ರವಾರ ಬೆಳಗ್ಗೆ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಈ ಘಟನೆ ಖಂಡಿಸಿ ವೈದ್ಯರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!