Thursday, November 21, 2024

78ನೇ ಸ್ವಾತಂತ್ರ್ಯ ದಿನಾಚರಣೆ : ರಾಜ್ಯದ 20 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಗೌರವ !

ಜನಪ್ರತಿನಿಧಿ (ಬೆಂಗಳೂರು) : 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಪ್ರತಿ ವರ್ಷ ಕೊಡಮಾಡುವ ವಿಶಿಷ್ಟ ಸೇವಾ ಪದಕ ಹಾಗೂ ಸಾರ್ಥಕ ಸೇವಾ ಪದಕಕ್ಕೆ ರಾಜ್ಯದ 20 ಪೊಲೀಸ್‌ ಅಧಿಕಾರಿಗಳು ಪಾತ್ರರಾಗುತ್ತಿದ್ದಾರೆ.

ಈ ಬಾರಿ ಸ್ವಾತಂತ್ರೋತ್ಸವದ ರಾಜ್ಯದ 20 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿಗಳ ಪದಕ ಒಲಿದಿದೆ. ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಘೋಷಣೆಯಾಗಿದೆ. ಐಎಸ್‌ಡಿ, ಎಡಿಜಿಪಿ ಎಂ. ಚಂದ್ರಶೇಖರ್ ಹಾಗೂ ಅಗ್ನಿಶಾಮಕ ದಳದ ಸೀನಿಯರ್ ಕಮಾಂಡರ್ ಬಸವಲಿಂಗಪ್ಪ ಅವರಿಗೆ ಅತ್ಯುತ್ತಮ ಸೇವಾ ಪದಕ ಘೋಷಣೆ ಮಾಡಲಾಗಿದೆ.

ಪೊಲೀಸ್‌ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ, ಕೇಂದ್ರ ಗೃಹ ಸಚಿವಾಲಯ ಪದಕ ಘೋಷಣೆ ಮಾಡಿದ್ದು, ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆಯಂದು ಪದಕ ಪ್ರದಾನ ಮಾಡಲಾಗುತ್ತದೆ.

ವಿಶಿಷ್ಟ ಸೇವಾ ಪದಕ ಹಾಗೂ ಸಾರ್ಥಕ ಸೇವಾ ಪದಕಕ್ಕೆ ಆಯ್ಕೆಯಾದ ರಾಜ್ಯದ 20 ಪೊಲೀಸ್‌ ಅಧಿಕಾರಿಗಳು :

ಶ್ರೀನಾಥ್ ಎಂ ಜೋಷಿ, ಎಸ್‌ಪಿ ಲೋಕಾಯುಕ್ತ
ಸಿ.ಕೆ ಬಾಬಾ, ಎಸ್‌ಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ
ರಾಮಗೊಂಡ ಬೈರಪ್ಪ, ಎಎಸ್‌ಪಿ ಕರ್ನಾಟಕ
ಗಿರಿ ಕೃಷ್ಣಮೂರ್ತಿ, ಡಿಎಸ್‌ಪಿ
ಪಿ ಮುರಳೀಧರ್, ಡಿಎಸ್‌ಪಿ
ಬಸವೇಶ್ವರ, ಅಸಿಸ್ಟೆಂಟ್ ಡೈರೆಕ್ಟರ್
ಬಸವರಾಜು ಕಮ್ತಾನೆ, ಡಿಎಸ್‌ಪಿ
ರವೀಶ್ ನಾಯಕ್, ಎಸಿಪಿ
ಶರತ್ ದಾಸನಗೌಡ, ಎಸ್‌ಪಿ
ಪ್ರಭಾಕರ್ ಗೋವಿಂದಪ್ಪ, ಎಸಿಪಿ
ಗೋಪಾಲ್ ರೆಡ್ಡಿ, ಡಿಸಿಪಿ
ಬಿ. ವಿಜಯ್ ಕುಮಾರ್, ಹೆಡ್ ಕಾನ್ಸ್‌ಟೇಬಲ್
ಮಂಜುನಾಥ ಶೇಕಪ್ಪ ಕಲ್ಲೆದೇವರ್, ಸಬ್ ಇನ್ಸ್‌ಪೆಕ್ಟರ್
ಹರೀಶ್ ಎಚ್.ಆರ್, ಅಸಿಸ್ಟೆಂಟ್ ಕಮಾಂಡೆಂಟ್
ಎಸ್ ಮಂಜುನಾಥ, ಇನ್ಸ್‌ಪೆಕ್ಟರ್
ಗೌರಮ್ಮ ಜಿ., ಎಎಸ್ಐ

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!