Monday, September 9, 2024

ಕಾಶ್ಮೀರದಲ್ಲಿ ಗುಂಡಿನ ಕಾಳಗ : ಕ್ಯಾಪ್ಟನ್‌ ಹುತಾತ್ಮ, ನಾಲ್ವರು ಉಗ್ರರ ಹತ್ಯೆ

ಜನಪ್ರತಿನಿಧಿ (ಶ್ರೀನಗರ)  : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ೪೮ ರಾಷ್ಟ್ರೀಯ ರೈಫಲ್ಸ್‌ನ ಭಾರತೀಯ ಸೇನೆಯ ಕ್ಯಾಪ್ಟನ್‌ ಹುತಾತ್ಮರಾಗಿದ್ದು, ಯೋಧರೊಬ್ಬರುಯ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಶಿವಗಢ ಅಸ್ಸಾರ್‌ ಪ್ರದೇಶದಲ್ಲಿ ಯಗ್ರರು ಅಡಗಿರುವ ಶಂಕೆಯ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮಾಡಲಾಯಿತು. ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ.

ಉಗ್ರರ ಬಳಿ ಕಾರ್ಬೈನ್‌ ಬಂದೂಕು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ ಎಂದು ತಿಳಿದು ಬಂದಿದೆ.

ಇತ್ತ ಜಮ್ಮು ಹಾಗೂ ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳಿಗೆ ಸಂಬಂಧಿಸಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆಂದು ವರದಿಯಾಗಿದೆ.

ರಕ್ಷಣಾ ಕಾರ್ಯದರ್ಶಿ ಗಿರಿಧರ್‌ ಅರಮನೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಭಾಲ್‌, ಸೇನಾ ಮುಖ್ಯಸ್ಥರಾದ ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವುವೇದಿ, ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕ ಲೆಫ್ಟಿನೆಂಟ್‌ ಜನರಲ್‌ ಪ್ರತೀಕ್‌ ಶರ್ಮಾ ಹಾಗೂ ಭದ್ರತಾ ಸಂಬಂಧಿಸಿದಂತೆ ಏಜೆನ್ಸಿಗಳ ಮುಖ್ಯಸ್ಥರು ಸಭೆಯಲ್ಲಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!