spot_img
Saturday, December 7, 2024
spot_img

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ 7ನೇ ಬಾರಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಸಾಧನಾ ಪ್ರಶಸ್ತಿ

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಸಹಕಾರ ರಂಗದಲ್ಲಿ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ. ಸಾಧನೆಯ 93 ವರ್ಷಗಳ ಸಾರ್ಥಕ ಸೇವೆಯಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘಕ್ಕೆ ಸತತ 7ನೇ ಬಾರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ‘ಸಾಧನಾ ಪ್ರಶಸ್ತಿ’ ಲಭಿಸಿದೆ.

ಸಂಘವು ನೌಕರ ಸದಸ್ಯರಿಗೆ ಉತ್ತಮ ಸೇವೆಯನ್ನು ನೀಡುತ್ತಿದ್ದು, ಕಳೆದ 28 ವರ್ಷಗಳಿಂದ ತನ್ನ ಸದಸ್ಯರ ಆರ್ಥಿಕ ಬೇಡಿಕೆಯನ್ನು ಪೂರೈಸಿ ಸದೃಢವಾಗಿ ಬೆಳೆದಿದೆ. ಮಂಗಳೂರು ನಗರದ ಕೊಡಿಯಾಲ್ ಬೈಲ್ ನಲ್ಲಿ ಮೂರು ಅಂತಸ್ತಿನ ಸ್ವಂತ ಕಟ್ಟಡವನ್ನು ಸಂಘ ಹೊಂದಿದೆ. ಸಂಘವು ಸತತ ಲಾಭ ಗಳಿಕೆಯಲ್ಲಿದ್ದು, ಸಹಕಾರಿ ನೌಕರ ಸದಸ್ಯರ ಆರ್ಥಿಕ ಶಕ್ತಿ ಎನಿಸಿದೆ. ಸಂಘದ ಕಾರ್ಯ ಸಾಧನೆಯನ್ನು ಗುರುತಿಸಿ ಎಸ್ ಸಿಡಿಸಿಸಿ ಬ್ಯಾಂಕ್ ನೀಡುವ ಪ್ರತಿಷ್ಠಿತ ಸಾಧನಾ ಪ್ರಶಸ್ತಿಯು 2017-18, 2018-19, 2019-20, 2020-21, 2021-22, 2022-23ನೇ ಸಾಲಿನಲ್ಲಿ ಪ್ರಾಪ್ತಿಯಾಗಿತ್ತು. ಇದೀಗ 2023-24ನೇ ಸಾಲಿನಲ್ಲೂ ಈ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘವು ಮುಡಿಗೇರಿಸಿಕೊಂಡಿದೆ.

ಬುಧವಾರ ನಡೆದ ಎಸ್.ಸಿಡಿಸಿಸಿ ಬ್ಯಾಂಕಿನ 110ನೇ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಂಘಕ್ಕೆ ನೀಡಿದ ಎಸ್ ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಟಿ.ಜಿ.ರಾಜರಾಮ ಭಟ್, ಭಾಸ್ಕರ್ ಎಸ್ ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೋಟ್ಟು, ಎಸ್. ಬಿ.ಜಯರಾಮ ರೈ, ರಾಜು ಪೂಜಾರಿ, ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ಹರಿಶ್ಚಂದ್ರ, ಕೆ. ಜೈರಾಜ್ ಬಿ.ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಎಸ್.ಎನ್.ಮನ್ಮಥ, ಕುಶಾಲಪ್ಪ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಉಭಯ ಜಿಲ್ಲೆಗಳ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್, ಉಭಯ ಜಿಲ್ಲೆಗಳ ಸಹಕಾರಿ ಯೂನಿಯನ್ ಅಧ್ಯಕ್ಷರುಗಳಾದ ಜಯಕರ ಶೆಟ್ಟಿ ಇಂದ್ರಾಳಿ, ಪ್ರಸಾದ್ ಕೌಶಲ್ ಶೆಟ್ಟಿ, ಸಹಕಾರಿ ನೌಕರರ ಸಹಕಾರ ಸಂಘದ ಉಪಾಧ್ಯಕ್ಷರಾದ ದಿವಾಕರ್ ಶೆಟ್ಟಿ, ನಿರ್ದೇಶಕರಾದ ಜಯಪ್ರಕಾಶ್ ರೈ, ವಿಶ್ವನಾಥ್ ಕೆ. ಟಿ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!