Monday, September 9, 2024

ಶಾರದಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ‍್ಯೋತ್ಸವ

ಜನಪ್ರತಿನಿಧಿ (ಬಸ್ರೂರು) : ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಸ್ರೂರು ಇಲ್ಲಿ ೭೮ನೇಯ ಸ್ವಾತಂತ್ರ‍್ಯ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಸಂತೋಷ್ ಕುಮಾರ್ ಶೆಟ್ಟಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಕೆದೂರು ಸೀತಾರಾಮ್ ಶೆಟ್ಟಿ ಅವರು ಮಾತನಾಡಿ, ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಮಹನೀಯರ ಬಗ್ಗೆ ತಿಳಿಸಿ ಮಕ್ಕಳಲ್ಲಿ ದೇಶಭಕ್ತಿ ಹಾಗೂ ಆತ್ಮಭಿಮಾನವನ್ನು ಹೆಚ್ಚಿಸುವ ಮಾತುಗಳನ್ನು ಆಡಿದರು.

ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ  ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗೋಪಾಲ್ ಶೆಟ್ಟಿ ಅವರು ಮಾತನಾಡಿ ಸ್ವಾತಂತ್ರ‍್ಯ  ಕೇವಲ ಆಚರಣೆಯಾಗಿ ಉಳಿಯದೆ ಅದರ ಮಹತ್ವವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು. ಹಾಗೂ ಮಕ್ಕಳ ಭವಿಷ್ಯಕ್ಕೆ ಶುಭ ಹಾರೈಕೆಗಳನ್ನು ಆಶಿಸಿದರು.

ಅಧ್ಯಕ್ಷೀಯ   ಮಾತನಾಡಿದ ಶಾಲಾ ಸಂಚಾಲಕರಾದ ಸಂತೋಷ್ ಕುಮಾರ್ ಶೆಟ್ಟಿ ಅವರು ಶಾಲೆಯ ಅಭಿವೃದ್ಧಿ ಹಾಗೂ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸದಾ ಶ್ರಮಿಸುತ್ತೇನೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮಮತಾ ಪೂಜಾರಿ, ಆಡಳಿತಾಧಿಕಾರಿಯಾದ ಆಶಾ ಶೆಟ್ಟಿ ಹಾಗೂ ಸಹ ಆಡಳಿತ ಅಧಿಕಾರಿಯಾದ ಸುಮಂತ್ ರವರು  ಉಪಸ್ಥಿತರಿದ್ದರು.

ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ  ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆದವು. ೯ನೇ ತರಗತಿ ರಿಫ  ಕಾರ್ಯಕ್ರಮಕ್ಕೆ ಸ್ವಾಗತವನ್ನು ಕೋರಿದರು. ಕಾರ್ಯಕ್ರಮ ನಿರೂಪಣೆಯನ್ನು ೮ನೇ ತರಗತಿಯ ದಿಗಂತ್ ಹಾಗೂ ೯ನೇ ತರಗತಿಯ ಸನ್ಮಿತ  ಅವರು,ಸಹ ಶಿಕ್ಷಕಿಯಾದ ಶ್ರೀರಾಣಿಯವರೊಂದಿಗೆ  ನಿರ್ವಹಿಸಿದರು. ಹಾಗೂ ೯ನೇ ತರಗತಿ ವಿದ್ಯಾರ್ಥಿ ಫಾತಿಮಾ  ಸದಾಫ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!