spot_img
Wednesday, January 22, 2025
spot_img

ತೆಕ್ಕಟ್ಟೆ: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: 78ನೇ ಸ್ವಾತಂತ್ರ್ಯ ದಿನಾಚರಣೆ

ತೆಕ್ಕಟ್ಟೆ: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ಆಗಸ್ಟ್ 15 ಸ್ವಾತಂತ್ರ್ಯ ದಿನದ ಪ್ರಯುಕ್ತ ಧ್ವಜಾರೋಹಣ ಕಾರ್‍ಯಕ್ರಮವನ್ನು ನೆರವೇರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸಾರ್ಜೆಂಟ್ ಅನಂತ ಕೃಷ್ಣ ಮಿತ್ಯಾಂತ ಧ್ವಜಾರೋಹಣ ನೆರವೇರಿಸಿ, ನಾವು ಪಾಶ್ಚ್ಯಾತ್ಯ ಸಂಸ್ಕೃತಿಗೆ ಮಾರು ಹೋಗದೆ ಭಾರತೀಯ ಸಂಸ್ಕಾರಯುತ ಸಂಸ್ಕೃತಿಯನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಸದೃಡ ದೇಶ ಕಟ್ಟಲು ದೇಶದ ಆಧಾರ ಸ್ತಂಭಗಳಾದ ಕೃಷಿಕರು, ಶಿಕ್ಷಕರು, ವೈಧ್ಯರು ಹಾಗೂ ಸೈನಿಕರ ಪಾತ್ರ ಬಹುಮುಖ್ಯವಾದುದ್ದು ಎಂದು ತಿಳಿಸಿದರು. ವಿದ್ಯಾರ್ಥಿಗಳು ತಾವು ಕಲಿತ ಶಾಲೆ ಹಾಗೂ ಗುರು ಭಕ್ತಿಯನ್ನು ಎಂದಿಗೂ ಮರೆಯಬಾರದು ಎಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಮೃತಧಾರ ಕುಂದಾಪುರ ಇದರ ಅಧ್ಯಕ್ಷರಾದ ಡಾ. ವಾಣಿಶ್ರೀ ಐತಾಳ್‌ರವರು ವಿದ್ಯಾರ್ಥಿಗಳಿಗೆ ಔಷಧೀಯ ಸಸ್ಯಗಳನ್ನು ವಿತರಿಸಿ ಸಸ್ಯಗಳ ಮಹತ್ವವನ್ನು ತಿಳಿಸಿದರು.

ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್ ರವರು ಮಾತನಾಡಿ ಸ್ವಾತಂತ್ರ್ಯ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿದರು, ಸಭಾದ್ಯಕ್ಷತೆ ವಹಿಸಿದ ಶಾಲಾ ಮ್ಯಾನೆಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿರವರು ಸರ್ವರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ಇದೇ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಿರುವ ಮಕ್ಕಳ ಪ್ಲೇ ಪಾರ್ಕ್‌ನ ಉದ್ಘಾಟನೆ ಮಾಡಲಾಯಿತು.
ಕಾರ್‍ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ ಆಲ್ಮೇಡಾ, ಶಿಕ್ಷಕ ವೃಂದದವರು, ವಿದಾರ್ಥಿಗಳು, ಪೋಷಕರು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ವಿದ್ಯಾರ್ಥಿಗಳಾದ ರಶ್ವತ್ ಸ್ವಾಗತಿಸಿ ಪರಿಚಯಿಸಿದರು, ಶ್ರೀವೈಷ್ಣವಿ ಕಾರ್‍ಯಕ್ರಮ ನಿರೂಪಿಸಿದರು, ಸುರಕ್ಷಾ ವಂದಿಸಿದರು, ಶಿಕ್ಷಕಿಯರಾದ ಸ್ಮಿತಾ ನಾಯ್ಕ್ ಹಾಗೂ ನಾಗರತ್ನ ಹೆಬ್ಬಾರ್ ಕಾರ್ಯಕ್ರಮ ಸಂಘಟಿಸಿದರು.

 

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!