spot_img
Tuesday, March 31, 2026
spot_img

ಕೆರಾಡಿ ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಚಲನಚಿತ್ರ ನಟ ರಿಷಭ್ ಶೆಟ್ಟಿ

ಕೆರಾಡಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರಾಡಿ ಇಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಶಾಲೆಯನ್ನು ದತ್ತು ತೆಗೆದುಕೊಂಡಿರುವ ರಿಷಬ್ ಶೆಟ್ಟಿ ಫೌಂಡೇಶನ್ ಸ್ಥಾಪಕರು ಹಾಗೂ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿಯವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ರಿಷಬ್ ಶೆಟ್ಟಿಯವರು ಸ್ವಾತಂತ್ರ ದಿನದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ಪ್ರಸನ್ನ ಕುಮಾರ ಶೆಟ್ಟಿ, ಗ್ರಾಮ ಪಂಚಾಯತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತೀಶ್ ಕೊಠಾರಿ, ಶಿಕ್ಷಣ ಇಲಾಖೆಯ ಸಿ.ಆರ್.ಪಿ ನಾಗರಾಜ್ ಶೆಟ್ಟಿ ಹಾಗೂ ಮುಖ್ಯ ಶಿಕ್ಷಕರಾದ ಭಾಸ್ಕರ್ ಶೆಟ್ಟಿ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಎಂಟನೇ ತರಗತಿ ವಿದ್ಯಾರ್ಥಿನಿ ಸಂಜನಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿಯಾದ ಕುಸುಮ ವಂದಿಸಿದರು. ಎಸ್,ಡಿ.ಎಂ.ಸಿ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!