spot_img
Saturday, February 14, 2026
spot_img

ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ವಂಡ್ಸೆ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕೋಶಾಧಿಕಾರಿ ಗಿಳಿಯಾರು ಶ್ರೀಧರ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಎಸ್.ಡಿ.ಎಂಸಿ ಉಪಾಧ್ಯಕ್ಷ ರಾಜು, ಗ್ರಾಮ ಪಂಚಾಯತ್ ಸದಸ್ಯರಾದ ಉದಯಕುಮಾರ್ ಶೆಟ್ಟಿ, ಶಶಿಕಲಾ ವಂಡ್ಸೆ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿ.ಕೆ ಶಿವರಾಮ ಶೆಟ್ಟಿ, ನಿವೃತ್ತ ಬ್ಯಾಂಕ್ ಸಿಬ್ಬಂದಿ ರಾಜೇಂದ್ರ ಗಾಣಿಗ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ, ಕಾರ್ಯದರ್ಶಿ ದಿವಾಕರ, ಮುಖ್ಯೋಪಾಧ್ಯಾಯರಾದ ಸದಾಶಿವ, ಮಹಮ್ಮದ್ ರಫೀಕ್, ಎಸ್.ಡಿ‌ಎಂ.ಸಿ ಸದಸ್ಯರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಸದಾಶಿವ ಕೆಂಚನೂರು ಸ್ವಾಗತಿಸಿ, ಸಹ ಶಿಕ್ಷಕ ಸುಧಾಕರ ಕಾರ್ಯಕ್ರಮ ನಿರ್ವಹಿಸಿ, ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ವಂದಿಸಿದರು.

ಬಳಿಕ ವಂಡ್ಸೆ ಮುಖ್ಯ ರಸ್ತೆಯ ತನಕ ಪುರಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನಗೊಂಡಿತು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ.ಪೂರ್ಣಿಮಾ ಶೆಟ್ಟಿ, ಎಸ್.ಡಿ.ಎಂ.ಸಿ ಸದಸ್ಯರು, ಗ್ರಾಮಸ್ಥರು, ಶಿಕ್ಷಣಾಭಿಮಾನಿಗಳು ಉಪಸ್ಥಿತರಿದ್ದರು.

https://fb.watch/tZKPtHILyB/

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!