spot_img
Thursday, April 2, 2026
spot_img

ಚಿತ್ತೂರು ಹಯಾತುಲ್ ಇಸ್ಲಾಂ ಅರೇಬಿಕ್ ಶಾಲೆಯಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ

ಚಿತ್ತೂರು: 77 ವರ್ಷಗಳ ಹಿಂದೆ ತ್ಯಾಗ ಬಲಿದಾನಗಳ ಮೂಲಕ ನಮ್ಮ ಹಿರಿಯರು ಪಡೆದ ಸ್ವಾತಂತ್ರ್ಯ ಇಂದು ದೇಶದಾದ್ಯಂತ ನಾವೆಲ್ಲರೂ ಆಚರಿಸುತ್ತಿರುವ ಸಂಭ್ರಮದ 78ನೇ ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ನಾವೆಲ್ಲರೂ ಪರಸ್ಪರ ಸಹೋದರತೆಯಿಂದ ಶಾಂತಿ ಸೌಹಾರ್ದತೆಯಿಂದ ಬಾಳಿದಾಗ ಮಾತ್ರ ಪ್ರತಿಯೊಬ್ಬರಲ್ಲೂ ದೇಶಭಕ್ತಿ ರಾಷ್ಟ್ರ ಪ್ರೇಮ ಮೂಡಲು ಸಾಧ್ಯ ಎಂದು ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ಶೆಟ್ಟಿ ಹೇಳಿದರು.

ಅವರು ಚಿತ್ತೂರಿನ ಹಯಾತುಲ್ ಇಸ್ಲಾಂ ಅರೇಬಿಕ್ ಶಾಲೆಯಲ್ಲಿ ನಡೆದ ೭೮ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಧ್ವಜಾರೋಹಣ ನೆರವೇರಿಸಿದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾದ ಡಾ. ಅತುಲ್ ಕುಮಾರ್ ಶೆಟ್ಟಿ ಯವರು ಮಾತನಾಡಿ ಡಾ. ಅಬ್ದುಲ್ ಕಲಾಂ ಅವರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣಗೊಳಿಸೋಣ ಎಂದು ಶುಭ ಹಾರೈಸಿದರು.

ವಂಡ್ಸೆ ಜುಮ್ಮಾ ಮಸೀದಿಯ ಖತಿಬರಾದ ಅಬ್ದುಲ್ ರಜಾಕ್ ಮುಸ್ಲಿಯಾರ್ ದುವಾ ನೆರವೇರಿಸಿದರು. ಹೋಟೆಲ್ ಅಂಬಿಕಾದ ಸುರೇಶ್, ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ರಾಘವೇಂದ್ರ, ಅರೇಬಿಕ್ ಸ್ಕೂಲ್ ನ ಅಧ್ಯಕ್ಷ ಇಕ್ಬಾಲ್, ಕಾರ್ಯದರ್ಶಿ ಇರ್ಷಾದ್ ಮಾಜಿ ಅಧ್ಯಕ್ಷರುಗಳಾದ ಹಂಝಾ ಸಾಹೇಬ್, ಅಬ್ದುಲ್ ರಹಮಾನ್, ಹಸನ್ ಸಾಹೇಬ್ , ಸದಸ್ಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.

ಹಕೀಮ್ ಉಸ್ತಾದ್ ಪ್ರತಿಜ್ಞಾ ವಿಧಿ ಬೋಧಿಸಿದರು. ಅಬ್ದುಲ್ ಸಲಾಂ ಚಿತ್ತೂರು ಸ್ವಾಗತಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!