spot_img
Wednesday, April 1, 2026
spot_img

ಸ.ಕಿ.ಪ್ರಾ.ಶಾಲೆ ಮೆಕ್ಕೆ: 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಜಡ್ಕಲ್: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಕ್ಕೆ ಇಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಂಬೇಡ್ಕರ್ ಹಾಗೂ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರೊಂದಿಗೆ ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ರಾಧಾ ನೆರವೇರಿಸಿದರು.

ಈ ಸಂದರ್ಭದಲ್ಲಿ ಮೆಸ್ಕಾಂನ ಕೊಲ್ಲೂರು ಶಾಖೆಯ ತಾಂತ್ರಿಕ ವರ್ಗದ ಸಿಬ್ಬಂದಿಯಾದ ತಾಮಸ್, ಸಾಗರ್, ಶಿವಾನಂದ, ಇಬ್ರಾಹಿಂ ಇವರನ್ನು ಶಾಲಾ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭಾರತಿ ಜಿ ಶೆಟ್ಟಿ ಅತ್ತಿಕಾರ್, ಶಾಲಾ ಸ್ಥಾಪಕ ಅಧ್ಯಕ್ಷರಾದ ಎಂ.ಜೆ .ಬೇಬಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಂದ್ರ ಟಿ., ಕೊಲ್ಲೂರು ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಮಹಾಬಲ ಪೂಜಾರಿ, ಶಾಲಾ ಅಂಗನವಾಡಿ ಕಾರ್ಯಕರ್ತೆಯಾದ ಪೂರ್ಣಿಮಾ ಇವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಗುರುಗಳಾದ ವಿಶ್ವನಾಥ್ ಅವರು ಶಾಲೆಯ ವೇದಿಕೆಗೆ ಸ್ಕ್ರೀನ್ ಕೊಡುಗೆಯಾಗಿ ನೀಡಿದ ನಾರಾಯಣ ಶೆಟ್ಟಿ ಅತ್ತಿಕಾರ್ ಹಾಗೂ ದಾನಿಗಳಾದ ಅಬ್ದುಲ್ ರೆಹಮಾನ್ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿದರು. ರಾಧಾ ಇವರ ಅಧ್ಯಕ್ಷತೆಯಲ್ಲಿ ಶಾಲಾ ಮಕ್ಕಳಿಗೆ ಐಡಿ ಕಾರ್ಡ್ ವಿತರಣೆಯನ್ನು ಮಾಡಲಾಯಿತು

ವಿಜಯಲಕ್ಷ್ಮಿ ಸ್ವಾಗತಿಸಿದರು. ಗೀತಾ ಕಾರ್ಯಕ್ರಮ ನಿರ್ವಹಿಸಿದರು.ಮಹಾಬಲ ಪೂಜಾರಿ ವಂದಿಸಿದರು.

ಶಾಲಾ ಮಕ್ಕಳಿಂದ ನೃತ್ಯ ವೈಭವ ಎಂಬ ಸ್ವಾತಂತ್ರ್ಯದ ನೆನಪುಗಳನ್ನು ಸ್ಮರಿಸುವ ನೃತ್ಯ ಪ್ರದರ್ಶನ ಜರುಗಿತು ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಸಿಬ್ಬಂದಿ ,ಪೋಷಕರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಹಳೆ ವಿದ್ಯಾರ್ಥಿ ಗಳು ಹಾಗೂ ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!