Wednesday, September 11, 2024

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

ಕೋಟ ಸಹಕಾರಿ ವ್ಯವಸಾಯಕ ಸಂಘ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು ೨೦೨೨-೨೩ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವೆಂದು, ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಹಿನ್ನಲೆಯಲ್ಲಿ ದಿನಾಂಕ ೧೪.೦೮.೨೦೨೪ರಂದು ಮಂಗಳೂರಿನಲ್ಲಿ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಅಧ್ಯಕ್ಷರಾದ  ಡಾ. ಎಂ. ಎನ್. ರಾಜೇಂದ್ರ ಕುಮಾರ್‌ರವರು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷರಾದ ಡಾ| ಕೃಷ್ಣ ಕಾಂಚನ್ ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ  ಶರತ ಕುಮಾರ್ ಶೆಟ್ಟಿ ಇವರಿಗೆ ಬ್ಯಾಂಕಿನ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಜಿ. ತಿಮ್ಮ ಪೂಜಾರಿ ಮತ್ತು ನಿರ್ದೇಶಕರಾದ ಭಾಸ್ಕರ ಶೆಟ್ಟಿ ಇವರು ಉಪಸ್ಥಿತರಿದ್ದರು.

ಕೋಟ ಸಹಕಾರಿ ವ್ಯವಸಾಯಕ ಸಂಘವು ಪ್ರಾರಂಭಗೊಂಡು ೬೬ ವರ್ಷಗಳ ಸಾರ್ಥಕ ಸೇವೆಯನ್ನು ನೀಡಿ, ೬೭ನೇ ವರ್ಷದಲ್ಲಿ ಯಶಪ್ರದವಾಗಿ ಮುನ್ನೆಡೆಯುತ್ತಿರುವ ಸಂದರ್ಭ ಸಂಘವು ೨೪೩ ಕೋಟಿಗೂ ಮಿಕ್ಕಿ ಠೇವಣಾತಿ ಹೊಂದಿ, ೧೯೪ ಕೋಟಿಗೂ ಮಿಕ್ಕಿ ಸಾಲ ನೀಡಿದ್ದು, ೨೭೭ ಕೋಟಿಗೂ ಮಿಕ್ಕಿ ದುಡಿಯುವ ಬಂಡವಾಳದೊಂದಿಗೆ ಸತತ ೧೫ ವರ್ಷಗಳಿಂದ ಅ ತರಗತಿ ಆಡಿಟ್ ವರ್ಗೀಕರಣ ಹೊಂದಿರುತ್ತದೆ. ೨೦೨೩-೨೪ನೇ ಸಾಲಿನಲ್ಲಿ ಶೇ.೯೯.೨೦ರಷ್ಟು ಸಾಲ ವಸೂಲಾತಿಯೊಂದಿಗೆ ೫.೬೬ ಕೋಟಿ ಲಾಭವನ್ನು ಗಳಿಸಿ ಇನ್ನಿತರ ಸಹಕಾರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿs ಸಂಘವು ಮುಂಚೂಣಿಯಲ್ಲಿದೆ. ಸಂಘವು ಕೇಂದ್ರ ಸರಕಾರದ ಯೋಜನೆಯಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ರಾಜ್ಯದಲ್ಲೇ ಪ್ರಪ್ರಥಮವಾಗಿ ಸಹಕಾರಿ ಸಂಸ್ಥೆಯಾಗಿ ಅನುಷ್ಠಾನಕ್ಕೆ ತಂದಿರುತ್ತದೆ ಮತ್ತು ತನ್ನದೇ ವಿಶಿಷ್ಟ ಯೋಜನೆಯಾದ ರೈತ ಸಂಜೀವಿನಿ ಕ್ರೆಡಿಟ್ ಕಾರ್ಡ್ ವಿತರಿಸಿರುತ್ತದೆ ಹಾಗೂ ಸಕಲ ಮಾರಾಟ ಮಳಿಗೆಯ ಮೂಲಕ ಕೃಷಿ ಉಪಕರಣ ಮತ್ತು ದಿನಬಳಕೆಯ ವಸ್ತುಗಳನ್ನು ಕೈಗೆಟುಕುವ ದರದಲ್ಲಿ ವಿತರಿಸಿ ಯಶಸ್ವಿಯಾಗಿದೆ.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!