Wednesday, September 11, 2024

ಬಿಜೆಪಿ & ಜೆಡಿಎಸ್‌ ಸಿದ್ದರಾಮಯ್ಯ ಅವರಿಗೆ ಭ್ರಷ್ಟಾಚಾರದ ಕಳಂಕ ಹಚ್ಚುವ ಪ್ರಯತ್ನದಲ್ಲಿ ಮುಳುಗಿವೆ : ವಿಕಾಸ್‌ ಹೆಗ್ಡೆ ಆಕ್ರೋಶ

ಜನಪ್ರತಿನಿಧಿ (ಉಡುಪಿ) : ರಾಜ್ಯಪಾಲರು ರಾಜಕಾರಣಿಯಾಗಿದ್ದಾರೆ. ರಾಜಕೀಯ ರಹಿತವಾಗಿ ರಾಜಧರ್ಮ ಪಾಲನೆ ಮಾಡಬೇಕಾದ ರಾಜ್ಯಪಾಲರು ರಾಜಕೀಯ ದುರುದ್ದೇಶ ಪೂರಿತ ನಿರ್ಧಾರಗಳನ್ನು ಕೈಗೊಳ್ಳುತ್ತಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಮಾಡಿದ ಅಪಚಾರವಾಗಿದೆ. ಮುಡಾ ನಿವೇಶನ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಯಾವುದೇ ಹಗರಣ ಮಾಡದೆ ಇದ್ದರೂ ಸಹ ಸುದೀರ್ಘ ಅವಧಿಯ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದ ರಾಜಕಾರಣಿ ಸಿದ್ದರಾಮಯ್ಯರವರಿಗೆ ಭ್ರಷ್ಟಾಚಾರದ ಕಳಂಕ ಹಚ್ಚುವ ಕೆಲಸವನ್ನು ಭ್ರಷ್ಟಾಚಾರದಲ್ಲಿ ಮುಳುಗಿ ಎದ್ದಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರುಗಳು ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ ವಕ್ತಾರ ವಿಕಾಸ್‌ ಹೆಗ್ಡೆ ಆಕ್ರೋಶ ಹೊರ ಹಾಕಿದ್ದಾರೆ.

ಇವರ ದುರುದ್ದೇಶ ಪೂರಿತ ರಾಜಕಾರಣಕ್ಕೆ ಬೆನ್ನೆಲುಬಾಗಿ ರಾಜ್ಯಪಾಲರು ನಿಂತಿದ್ದಾರೆ. ಸಂವಿಧಾನದ ಅಡಿಯಲ್ಲಿ ಹಿರಿಯಣ್ಣನಾಗಿ ರಾಜ್ಯವನ್ನು ಪಾಲನೆ ಮಾಡಬೇಕಾದ ರಾಜ್ಯಪಾಲರು ತನ್ನ ರಾಜಕೀಯ ಪ್ರೇರಿತ ನಿರ್ಧಾರಗಳ ಮೂಲಕ ರಾಜ್ಯವನ್ನು ಹಾಳು ಮಾಡಲು ಹೊರಟ ಹಾಗಿದೆ. ಸಂವಿಧಾನದ ಅಡಿಯಲ್ಲಿ ವಿಶೇಷ ಗೌರವ ಹೊಂದಿರುವ ರಾಜ್ಯಪಾಲರಿಗೆ ರಾಜಕೀಯ ರಹಿತವಾಗಿ ಕರ್ತವ್ಯ ನಿರ್ವಹಿಸಲು ಕಷ್ಟವಾದರೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು ಮರಳಿ ಸಕ್ರಿಯ ರಾಜಕಾರಣಕ್ಕೆ ಮರಳುವುದು ಉತ್ತಮ ಎಂದು ಹೇಳಿದ್ದಾರೆ.

ವಿರೋಧ ಪಕ್ಷದವರು, ರಾಜ್ಯಪಾಲರು ಯಾರು ಏನೇ ಪ್ರಯತ್ನಪಟ್ಟರೂ ಸಾಮಾಜಿಕ ನ್ಯಾಯದ ಹರಿಕಾರ ಸಿದ್ದರಾಮಯ್ಯನವರನ್ನು ಏನೂ ಮಾಡಲು ಸಾಧ್ಯವಿಲ್ಲ, ನೂರು ಅಪರಾಧಿಗಳಿಗೆ ಶಿಕ್ಷೆ ಆಗದೆ ಇದ್ದರೂ ಪರವಾಗಿಲ್ಲ ಆದರೆ ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎನ್ನುವ ಹೆಮ್ಮೆಯ ನ್ಯಾಯಾoಗ ವ್ಯವಸ್ಥೆ ನಮ್ಮದು ಆದುದರಿಂದ ಯಾವುದೇ ಹಗರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾನೂನು ಹೋರಾಟದಲ್ಲಿ ಜಯಶಾಲಿಯಾಗಿ ಹೊರಗೆ ಬರಲಿದ್ದಾರೆ ಎಂದು ವಿಕಾಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!